ಚಿತ್ರದುರ್ಗದಲ್ಲಿ ಭೀಕರ ಅಪಘಾತ.!
ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಕಲ್ಕುಂಟೆ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಬೆಳ್ಳಂಬಳಗೆ ಎರಡು ಲಾರಿಗಳ ನಡುವೆ ಅಪಘಾತ ನಡೆದು ಮೂವರ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.
ಚಿತ್ರದುರ್ಗದಿಂದ ದಾವಣಗೆರೆ ಕಡೆ ಹೋಗುತ್ತಿದ್ದ ಲಾರಿ ಡಿವೈಡರ್ ಅನ್ನ ದಾಟಿದಾವಣಗೆರೆಯಿಂದ ಚಿತ್ರದುರ್ಗ ಕಡೆ ತೆರಳುತ್ತಿದ್ದ ಲಾರಿ ಮದ್ಯೆ ಡಿಕ್ಕಿಯದ ರಬಸಕ್ಕೆ ಮೂರು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಇನ್ನು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಈ ಒಂದು ಘಟನೆ ಭರಮಸಾಗರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದಿದ್ದು ಸ್ಥಳಕ್ಕೆ ಭರಮಸಾಗರ ಪೊಲೀಸ್ ಠಾಣ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಅಪಘಾತಕ್ಕೊಳಗಾದವರನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ ಇನ್ನು ಅಪಘಾತಕ್ಕೆ ಒಳಗಾದವರ ಬಗ್ಗೆ ಮಾಹಿತಿ ತಿಳಿದು ಬರಬೇಕಿದೆ.
For More Updates Join our WhatsApp Group :




