ನ್ಯೂಯಾರ್ಕ್ : ಅಮೆರಿಕದ ನ್ಯೂಯಾರ್ಕ್ನ ಟೈಮ್ಸ್ ಸ್ಕ್ವೇರ್ನಲ್ಲಿ ಭಾರಿ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಳಗಿನ ಜಾವ 1.20 ರ ಸುಮಾರಿಗೆ ನಡೆದಿದೆ. ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದು, ಜನರು ಸ್ಥಳದಿಂದ ಓಡುತ್ತಿರುವುದು ಹಾಗೂ ಪೊಲೀಸರು ಪ್ರದೇಶವನ್ನು ಸುತ್ತುವರೆದಿರುವುದು ಹಾಗೂ ಗಾಯಾಳುಗಳಿಗೆ ಚಿಕಿತ್ಸೆ ನೀಡುತ್ತಿರುವುದನ್ನು ಕಾಣಬಹುದು.ಒಬ್ಬ ಶಂಕಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ. ಇನ್ನೂ ಯಾವುದೇ ದೂರು ದಾಖಲಾಗಿಲ್ಲ.ಘಟನೆಗೆ ಕಾರಣವೂ ತಿಳಿದುಬಂದಿಲ್ಲ.
For More Updates Join our WhatsApp Group :