ಬೆಂಗಳೂರು: ಕರ್ನಾಟಕದಾದ್ಯಂತ ಮಳೆ ಆರ್ಭಟ ಮುಂದುವರೆಯಲಿದೆ. ಇಂದಿನಿಂದ ಮುಂದಿನ 7 ದಿನ ಅಂದರೆ ಅ. 22ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುಸ್ಸೂಚನೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಹಗುರದಿಂದ ಕುಡಿದ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಚಾಮರಾಜನಗರ, ಕೋಲಾರ, ಹಾಸನ, ಮೈಸೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚ್ಚಕಕಬಳಾುಪುರ, ಚಿಕ್ಕಮಗಳೂರು, ಸಿ.ಬಿ.ಪುರ, ಮಂಡ್ಯ, ತುಮಕೂರು, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ ಮತ್ತು ಹಾವೇರಿ ಮತ್ತು ರಾಮನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಜೋರಾದ ಗಾಳಿಯೊಂದಿಗೆ ಚದುರದಿಂದ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರೀ ಮಳೆ ಆಗಲಿದೆ. ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಅದೇ ರೀತಿಯಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಗುಡುಗು ಸಹಿತ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.
For More Updates Join our WhatsApp Group :