ದೆಹಲಿ ಬ್ಲಾಸ್ಟ್ ಎಚ್ಚರಿಕೆ ನಡುವೆ ಜಾಮರ್ ವಾಹನ–100ಕ್ಕೂ ಹೆಚ್ಚು ಪೊಲೀಸರ ನಿಯೋಜನೆ.
ಬೆಳಗಾವಿ: 10 ದಿನಗಳ ಕಾಲ ನಡೆಯಲಿರುವ ಚಳಿಗಾಲದಅಧಿವೇಶನ ಇಂದಿನಿಂದ ಬೆಳಗಾವಿಯಲ್ಲಿ ಆರಂಭವಾಗಿದೆ. ದೆಹಲಿ ಬ್ಲ್ಯಾಸ್ಟ್ ಬೆನ್ನಲ್ಲೇ ಗುಪ್ತಚರ ಇಲಾಖೆ ನೀಡಿರುವ ಎಚ್ಚರಿಕೆ ಹಿನ್ನಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಂಗಿರುವ ಸರ್ಕ್ಯೂಟ್ ಹೌಸ್ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಜಾಮರ್ ವಾಹನ ಮತ್ತು 100ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. 80ಕ್ಕೂ ಹೆಚ್ಚು ಸಂಘಟನೆಗಳು ವಿವಿಧ ಬೇಡಿಕೆಗಳಿಗಾಗಿ ಪ್ರತಿಭಟನೆಗೆ ಕರೆ ನೀಡಿರುವುದರಿಂದ, ಪ್ರತಿಭಟನೆ ತೀವ್ರಗೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ.
For More Updates Join our WhatsApp Group :




