ಅಂಜನಾದ್ರಿ ಬೆಟ್ಟ ಏರುವ ಭಕ್ತರಿಗೆ ಸಮಯ ನಿಗದಿ.!

ಅಂಜನಾದ್ರಿ ಬೆಟ್ಟ ಏರುವ ಭಕ್ತರಿಗೆ ಸಮಯ ನಿಗದಿ.!

ಬಿಸಿಲಿನ ತೀವ್ರತೆಗೆ ಕೊಪ್ಪಳ ಜಿಲ್ಲಾಡಳಿತದ ಹೊಸ ಆದೇಶ.

ಕೊಪ್ಪಳ: ಆಂಜನೇಯನ ಜನ್ಮಸ್ಥಳ ಕೊಪ್ಪಳದ ಅಂಜನಾದ್ರಿಯಲ್ಲಿ ಸೂರ್ಯನ ಪ್ರತಾಪ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಬೆಟ್ಟ ಏರುವ ಭಕ್ತರು ಬಿಸಿಲಿನ ತಾಪಕ್ಕೆ ತತ್ತರಿಸಿ ಹೋಗುತ್ತಿದ್ದು, ಅಸ್ವಸ್ಥಗೊಳ್ಳುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಕೊಪ್ಪಳ ಜಿಲ್ಲಾಡಳಿತ, ಮಧ್ಯಾಹ್ನದ ವೇಳೆ ಬೆಟ್ಟ ಏರುವುದನ್ನು ನಿಷೇಧಿಸಿ ಮಹತ್ವದ ಆದೇಶ ಹೊರಡಿಸಿದೆ. ಇನ್ಮುಂದೆ ಪ್ರತಿದಿನ ಬೆಳಗ್ಗೆ 11 ಗಂಟೆಯೊಳಗೆ ಮತ್ತು ಸಂಜೆ ನಾಲ್ಕು ಗಂಟೆಯ ಬಳಿಕ ಮಾತ್ರ ಭಕ್ತರಿಗೆ ಬೆಟ್ಟ ಏರಲು ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಇದೇ ಸಮಯದಲ್ಲಿ ಭಕ್ತರು  ಬಂದ್ರೆ ಮಾತ್ರ ಅಂಜನಾದ್ರಿ ಬೆಟ್ಟ ಹತ್ತಬಹುದು.

ಅಂಜನಾದ್ರೆ ಬೆಟ್ಟ ಹತ್ತಲು ಸಮಯ ನಿಗದಿ

ಅಂಜನಾದ್ರಿ ದೇವರ ದರ್ಶನಕ್ಕೆಂದು ಸ್ಥಳೀಯರು ಮಾತ್ರವಲ್ಲ, ಹೊರ ಜಿಲ್ಲೆ, ಹೊರ ರಾಜ್ಯಗಳಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಆದರೆ ಇನ್ನು ಮುಂದೆ ಹನುಮಪ್ಪನ ದರ್ಶನಕ್ಕೆ ಬರುವ ಭಕ್ತರಿಗೆ ಸಮಯದ ಬ್ರೇಕ್ ಬೀಳಲಿದೆ. ಸದ್ಯಕ್ಕೆ ಸಮಯ ಮಿತಿ ಇಲ್ಲದೇ ದೇವರ ದರ್ಶನಕ್ಕೆ ಹೋಗುತ್ತಿರುವ ಭಕ್ತರಿಗೆ ಇನ್ಮುಂದೆ ಸಮಯ ನಿಗದಿ ಮಾಡಲಾಗಿದ್ದು, ಬೆಳಗ್ಗೆ 11 ಗಂಟೆ ವರೆಗೆ ಮಾತ್ರ ಬೆಟ್ಟ ಹತ್ತು ಸಮಯ ನಿಗದಿಪಡಿಸಲಾಗಿದೆ. ಬಳಿಕ ಸಂಜೆ 4 ಗಂಟೆಗೆ ಅಂಜನಾದ್ರಿ ಬೆಟ್ಟ ಗೇಟ್ ಓಪನ್ ಆಗಲಿದೆ.

ಒಟ್ಟಿನಲ್ಲಿ, ಬೇಸಿಗೆಯ ಪ್ರಖರತೆ ಕಡಿಮೆಯಾಗುವವರೆಗೂ ಹನುಮಪ್ಪನ ದರ್ಶನಕ್ಕೆ ಬರುವ ಭಕ್ತರು ಸಮಯದ ಬದಲಾವಣೆಯನ್ನು ಗಮನಿಸಬೇಕಾದ ಅನಿವಾರ್ಯತೆ ಇದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *