ಇಂದು “ರಾಷ್ಟ್ರೀಯ ಕ್ರೀಡಾ ದಿನ”: ಕ್ರೀಡಾಪಟುಗಳಿಗೆ ಶುಭಾಶಯ ತಿಳಿಸಿದ ಪ್ರಧಾನಿ ನರೇಂದ್ರ ಮೋದಿ..!!

ಹಾಕಿ ಮಾಂತ್ರಿಕ ಮೇಜರ್‌ ಧ್ಯಾನ್‌ ಚಂದ್‌ ಅವರ ಜನ್ಮದಿನವನ್ನು ‘ರಾಷ್ಟ್ರೀಯ ಕ್ರೀಡಾ ದಿನ’ ಎಂದು ಆಚರಿಸಲಾಗುತ್ತಿದೆ. ಈ ದಿನದ ಪ್ರಯುಕ್ತ ದೇಶದ ಕ್ರೀಡಾಪಟುಗಳಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ತಿಳಿಸಿದ್ದಾರೆ.

ರಾಷ್ಟ್ರೀಯ ಕ್ರೀಡಾ ದಿನ

ಈ ಕುರಿತು ಟ್ವಿಟ್ಟರ್‌ ನಲ್ಲಿ ಟ್ವೀಟ್‌ ಮಾಡಿರುವ ಅವರು, ‘ರಾಷ್ಟ್ರೀಯ ಕ್ರೀಡಾ ದಿನವಾದ ಇಂದು ದೇಶದ ಎಲ್ಲಾ ಕ್ರೀಡಾಪಟುಗಳಿಗೆ ನನ್ನ ಶುಭಾಶಯಗಳು. ನಿಮ್ಮ ಸಾಧನೆಗಳ ಬಗ್ಗೆ ಇಡೀ ಭಾರತವೇ ಹೆಮ್ಮೆಪಡುತ್ತದೆ. ಮೇಜರ್ ಧ್ಯಾನ್‌ ಚಂದ್‌ ಅವರ ಜನ್ಮದಿನದಂದು ನಾನು ಅವರಿಗೆ ಗೌರವ ಸಲ್ಲಿಸುತ್ತೇನೆ’ ಎಂದು ಹೇಳಿದ್ದಾರೆ.

ಮೇಜರ್‌ ಧ್ಯಾನ್‌ ಚಂದ್‌ ಅವರ ಜನ್ಮ ದಿನವನ್ನು 2012ರಲ್ಲಿ ‘ರಾಷ್ಟ್ರೀಯ ಕ್ರೀಡಾ ದಿನ’ವೆಂದು ಘೋಷಿಸಲಾಯಿತು. ಅಂದಿನಿಂದ ಪ್ರತಿವರ್ಷ ಆಗಸ್ಟ್‌ 29ರಂದು ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಗುತ್ತಿದೆ.

ಧ್ಯಾನ್‌ ಚಂದ್‌ ಅವರು ಆಗಸ್ಟ್ 29, 1905ರಲ್ಲಿ ಅಲಹಾಬಾದ್‌ನಲ್ಲಿ ಜನಿಸಿದ್ದರು. ಹಾಕಿ ಕ್ರೀಡೆಯಲ್ಲಿ ಆಸಕ್ತಿ ಹೊಂದಿದ್ದ ಅವರ ಸಾರಥ್ಯದಲ್ಲಿ 1928ರ ಒಲಂಪಿಕ್ಸ್‌ನಲ್ಲಿ ಭಾರತ ಮೊದಲ ಚಿನ್ನದ ಪದಕ ಗೆದ್ದುಕೊಂಡಿತ್ತು. ಇವರ ಸಾಧನೆಯನ್ನು ಗುರುತಿಸಿ ಭಾರತ ಸರ್ಕಾರ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿತು.

Facebook: https://www.facebook.com/PragathiTV/

Pragati TV Social Connect for more latest u

Leave a Reply

Your email address will not be published. Required fields are marked *