Toll Price Hike: ಬೆಂಗಳೂರಿನ ಹೊರವಲಯದಲ್ಲಿ 2 ಹೆದ್ದಾರಿಗಳಲ್ಲಿ ಶುಲ್ಕ ಏರಿಕೆ | Latest Update

Toll Price Hike

ಬೆಂಗಳೂರು :  ಜನಸಾಮಾನ್ಯರಿಗೆ ದರ ಏರಿಕೆಗಳಿಂದ ಬೇಸೆತ್ತುಹೋಗಿದ್ದಾರೆ, ಇದರ ನಡುವೆಯೇ ಇಂದು ಮಧ್ಯ ರಾತ್ರಿಯಿಂದ ವಾಹನ ಸವಾರರಿಗೆ ಟೋಲ್ ಶಾಕ್ ಎದುರಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲ ರಾಷ್ಟ್ರೀಯ ಹೆದ್ದಾರಿ ಮೂಲಕ ಹಾಸನ ರಾಷ್ಟ್ರೀಯ ಹೆದ್ದಾರಿ 75 ರ ರಸ್ತೆಯಲ್ಲಿ ಸಂಚಾರ ಮಾಡುವ ವಾಹನ ಸವಾರರಿಗೆ ಸೆಪ್ಟೆಂಬರ್‌ 1 ರಿಂದ ದರ ಏರಿಕೆ ಮಾಡಿ ಶಾಕ್ ನೀಡಿದೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI). ಈ ದರ ಏರಿಕೆ ಇಂದು ಮಧ್ಯ ರಾತ್ರಿ 12 ಗಂಟೆಯಿಂದ ಜಾರಿಗೆ ಬರಲಿದೆ. ನೆಲಮಂಗಲ ದೇವಿಹಳ್ಳಿ ಎಕ್ಸ್‌ಪ್ರೆಸ್ ಪ್ರೈವೇಟ್ ಲಿಮಿಟೆಡ್‌ ಟೋಲ್​ಗಳಲ್ಲಿ ಏರಿಕೆಯಾಗಿದೆ.

ನೆಲಮಂಗಲ ಹಾಸನ ರಾಷ್ಟ್ರೀಯ ಹೆದ್ದಾರಿಯ ಟೋಲ್​ಗಳಲ್ಲಿ ವಾಹನ ಸವಾರರಿಗೆ ಹೆಚ್ಚಿನ ಸುಂಕ ಹೊರೆ ಎದುರಾಗಿದೆ. ದೊಡ್ಡಕರೇನಹಳ್ಳಿ ಟೋಲ್ ಹಾಗೂ ಕಾರಬೈಲು ಟೋಲ್ ಪ್ಲಾಜಾಗಳಲ್ಲಿ ದರ ಏರಿಕೆಯಾಗಿದೆ. ಏಕ ಮುಖ ಸಂಚಾರಕ್ಕೆ 5 ರೂಪಾಯಿ, ದ್ವಿಮುಖ ಸಂಚಾರಕ್ಕೆ 10 ರೂಪಾಯಿ ದರ ಏರಿಕೆ ಮಾಡಲಾಗಿದೆ

ಈಗ ಇರುವ ದರಗಳೆಂದರೆ, ಫಾಸ್​ಟ್ಯಾಗ್ ಇರುವ ಕಾರು, ಜೀಪು, ವ್ಯಾನ್ ಹಾಗೂ ಹಗುರ ವಾಹನಗಳಿಗೆ ಏಕಮುಖ ಸಂಚಾರಕ್ಕೆ 55 ರೂ ಇದೆ. ಇವತ್ತು ಮಧ್ಯರಾತ್ರಿಯಿಂದ ಇದರ ದರ 60 ರೂಗೆ ಏರಿಕೆ ಆಗುತ್ತದೆ. ದಿನದ ಸಂಚಾರವು 85 ರೂನಿಂದ 90 ರೂಗೆ ಏರಿಕೆ ಆಗುತ್ತಿದೆ. ಫಾಸ್​ಟ್ಯಾಗ್ ಇಲ್ಲದ ವಾಹನಗಳಿಗೆ ಏಕಮುಖ ಸಂಚಾರಕ್ಕೆ ಟೋಲ್ ದರ 110 ರೂನಿಂದ 120 ರೂಗೆ ಏರಿಕೆ ಆಗುತ್ತಿದೆ.

ಲೈಟ್ ಕಮರ್ಷಿಯಲ್ ವಾಹನ ಹಾಗೂ ಸರಕು ಸಾಗಣೆ ವಾಹನಗಳಾದರೆ ಏಕಮುಖ ಸಂಚಾರಕ್ಕೆ 100 ರೂ, ದಿನದ ಸಂಚಾರಕ್ಕೆ 155 ರೂ ಟೋಲ್ ಏರಿಸಲಾಗುತ್ತಿದೆ.

Leave a Reply

Your email address will not be published. Required fields are marked *