ಕೇಂಪು ಸುಂದರಿ ಟೊಮ್ಯಾಟೊ ಬೆಲೆ ತೀವ್ರ ಕುಸಿತ
ಚಿಕ್ಕಬಳ್ಳಾಪುರ : ಕೋಲಾರ–ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಗಳು ಅತ್ಯುತ್ತಮ ಗುಣಮಟ್ಟದ ಟೊಮ್ಯಾಟೊ ಬೆಳೆಗೆ ಖ್ಯಾತಿಯಾಗಿದ್ದರೂ, ಇದೀಗ ಕೇಂಪು ಸುಂದರಿ ಟೊಮ್ಯಾಟೊ ಬೆಲೆ ತೀವ್ರ ಕುಸಿತ ಕಂಡಿದೆ. ಚಿಕ್ಕಬಳ್ಳಾಪುರ ಎಪಿಎಂಸಿ ಮಾರುಕಟ್ಟೆಯಲ್ಲಿ 15 ಕೆ.ಜಿ ಟೊಮ್ಯಾಟೊ ಬಾಕ್ಸ್ ಕೇವಲ 110 ರೂಪಾಯಿಗೆ ಮಾರಾಟವಾಗುತ್ತಿದ್ದು ರೈತರು ಕಂಗಾಲಾಗಿದ್ದಾರೆ.
ಅಂತರ್ ರಾಜ್ಯಗಳಲ್ಲಿ ಬೇಡಿಕೆ ಕಡಿಮೆಯಾದ ಹಿನ್ನೆಲೆ ಬೆಲೆ ಇಳಿಕೆ ಕಂಡಿದ್ದು, ಮತ್ತೊಂದೆಡೆ ಚಿಲ್ಲರೆ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು 5 ಕೆ.ಜಿ ಟೊಮ್ಯಾಟೊವನ್ನು 100 ರೂಪಾಯಿಗೆ ಮಾರಾಟ ಮಾಡುತ್ತಿದ್ದಾರೆ. ಗ್ರಾಹಕರಿಗೆ ಸಿಹಿಯಾಗಿರುವ ಬೆಲೆ ಕುಸಿತ ರೈತರಿಗೆ ಮಾತ್ರ ಕಹಿಯಾಗಿದೆ. ರೈತರು ಟೊಮ್ಯಾಟೊಗೂ ಬೆಂಬಲ ಬೆಲೆ ನೀಡುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.
For More Updates Join our WhatsApp Group :




