6ನೇ ಗ್ಯಾರಂಟಿ ‘ಭೂಮಿ ಹಕ್ಕು’ ಜಾರಿ: ಡಿಕೆ ಶಿವಕುಮಾರ್
ಬೆಂಗಳೂರು: ನಾಳೆಗೆ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು 1 ಸಾವಿರ ದಿನ. ಹಾಗಾಗಿ ನಾಳೆ ಹಾಗೂ ನಾಡಿದ್ದು ನೀರಾವರಿ ವಿಚಾರದಲ್ಲಿ ಸಮ್ಮೇಳನವನ್ನು ಹಮ್ಮಿಕೊಂಡಿದ್ದೇವೆ. ಕೇಂದ್ರ ಮಂತ್ರಿಗಳು, ಸಿಎಂ ಸಿದ್ದರಾಮಯ್ಯ ಭಾಗಿಯಾಗುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆರನೇ ಗ್ಯಾರಂಟಿ ಯೋಜನೆಯಾದ ಭೂಮಿ ಗ್ಯಾರಂಟಿ ಬಗ್ಗೆ ಮಾಹಿತಿ ನೀಡಿದ್ದಾರೆ. ಸಾರ್ವಜನಿಕರಿಗೆ ನಿವೇಶನಗಳಿಗೆ ಭೂಮಿ ಹಕ್ಕುಗಳನ್ನು ಒದಗಿಸುವ ಉದ್ದೇಶವನ್ನು ಈ ಯೋಜನೆ ಹೊಂದಿದೆ. ಭೂಮಿ ಹಕ್ಕುಗಳಿಲ್ಲದ ಸಾಮಾನ್ಯ ಜನರಿಗೆ ಖಾತೆ ಮತ್ತು ಹಕ್ಕುಪತ್ರಗಳನ್ನು ನೀಡುವ ದೀರ್ಘಕಾಲದ ಸಮಸ್ಯೆಯನ್ನು ಪರಿಹರಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದಿದ್ದಾರೆ.
For More Updates Join our WhatsApp Group :




