ಬಿಹಾರ: ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಕೇವಲ ಒಂದೇ ಒಂದು ದಿನ ಬಾಕಿ ಉಳಿದಿದೆ. ಮಂಗಳವಾರ ರಾತ್ರಿ ಜೆಡಿಯು ನಾಯಕ ನಿರಂಜನ್ ಕುಶ್ವಾಹ ಅವರ ಕುಟುಂಬದ ಮೂವರು ಸದಸ್ಯರು ಶವವಾಗಿ ಪತ್ತೆಯಾಗಿರುವ ಘಟನೆ ವರದಿಯಾಗಿದೆ.
ಮೃತರನ್ನು ನಿರಂಜನ್ ಅವರ ಹಿರಿಯ ಸಹೋದರ ನವೀನ್ ಕುಶ್ವಾಹ, ಅವರ ಪತ್ನಿ ಕಾಂಚನ್ ಮಾಲಾ ಸಿಂಗ್ ಮತ್ತು ಅವರ ಮಗಳು ತನು ಪ್ರಿಯಾ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಕೆಹಾತ್ ಪೊಲೀಸ್ ಠಾಣೆ ವ್ಯಾಪ್ತಿಯ ಯುರೋಪಿಯನ್ ಕಾಲೋನಿಯಲ್ಲಿರುವ ಅವರ ಮನೆಯಿಂದ ಮಂಗಳವಾರ ರಾತ್ರಿ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಿವಾಸಿಗಳ ಪ್ರಕಾರ, ಮೃತರಲ್ಲಿ ಒಬ್ಬರು ಸ್ಥಳೀಯ ಜೆಡಿ (ಯು) ನಾಯಕ ನಿರಂಜನ್ ಕುಶ್ವಾಹ ಅವರ ಹಿರಿಯ ಸಹೋದರ ಎಂದು ಅವರು ಹೇಳಿದರು. ಮನೆಯಲ್ಲಿ ಮೃತದೇಹಗಳು ಪತ್ತೆಯಾದ ಬಗ್ಗೆ ಮಾಹಿತಿ ಪಡೆದ ಕೂಡಲೇ ಪೊಲೀಸ್ ತಂಡ ಸ್ಥಳಕ್ಕೆ ತಲುಪಿತು. ಸಾವಿಗೆ ನಿಖರವಾದ ಕಾರಣವನ್ನು ಕಂಡುಹಿಡಿಯಲು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಎಸ್‌ಡಿಪಿಒ ತಿಳಿಸಿದ್ದಾರೆ. ವಿಧಿವಿಜ್ಞಾನ ತಜ್ಞರು ಸ್ಥಳದಿಂದ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ, ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.
ನವೀನ್ ಕುಶ್ವಾಹ ಪ್ರದೇಶದಲ್ಲಿ ಬಹಳ ಜನಪ್ರಿಯರಾಗಿದ್ದರು ಮತ್ತು ಅವರು ಈ ಹಿಂದೆ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಸ್ಪರ್ಧಿಸಿದ್ದರು. ಬಿಹಾರ ವಿಧಾನಸಭಾ ಚುನಾವಣೆ ನವೆಂಬರ್ 6 ಹಾಗೂ 11ರಂದು ಎರಡು ಹಂತಗಳಲ್ಲಿ ನಡೆಯಲಿದೆ.
For More Updates Join our WhatsApp Group :
