ಸಿದ್ಧಗಂಗಾ ಮಠದಲ್ಲಿ ದುರಂತ: ಜನ್ಮದಿನೋತ್ಸವಕ್ಕೆ ಬಂದ ಭಕ್ತ ಸಾ*.

ಸಿದ್ಧಗಂಗಾ ಮಠದಲ್ಲಿ ದುರಂತ: ಜನ್ಮದಿನೋತ್ಸವಕ್ಕೆ ಬಂದ ಭಕ್ತ ಸಾ*.

119ನೇ ಜನ್ಮದಿನೋತ್ಸಕ್ಕೆಂದು ಸಿದ್ಧಗಂಗಾ ಮಠಕ್ಕೆ ಬಂದಿದ್ದ ಭಕ್ತ ಸಾ*.

ತುಮಕೂರು: ಡಾ. ಶಿವಕುಮಾರ ಸ್ವಾಮೀಜಿಗಳ 119ನೇ ಜನ್ಮದಿನೋತ್ಸಕ್ಕೆಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಬಂದಿದ್ದ ಭಕ್ತರೊಬ್ಬರು ಸಾವನ್ನಪ್ಪಿದ್ದಾರೆ. ಮೈಸೂರಿನಿಂದ ಸ್ನೇಹಿತರ ಜೊತೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ನಟರಾಜು(60) ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ತಾಯೂರು ನಿವಾಸಿ ನಟರಾಜ್ ಸಿದ್ಧಗಂಗಾ ಮಠದ ಹಳೇ ವಿದ್ಯಾರ್ಥಿಯಾಗಿದ್ದಾರೆ. ಇದರಿಂದ ಪ್ರತಿ ವರ್ಷ ಶಿವಕುಮಾರ್ ಸ್ವಾಮೀಜಿ ಕಾರ್ಯಕ್ರಮಕ್ಕೆ ಬರುತ್ತಿದ್ದರು. ಆದ್ರೆ, ಈ ಬಾರಿ ಮಠದಲ್ಲೇ ಅಸುನೀಗಿದ್ದಾರೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ತಾಯೂರು ನಿವಾಸಿ ನಟರಾಜ್, ಸಿದ್ಧಗಂಗಾ ಮಠದ ಹಳೇ ವಿದ್ಯಾರ್ಥಿ. ಹೀಗಾಗಿ ಪ್ರತಿ ವರ್ಷವೂ ಸಹ ಡಾ. ಶಿವಕುಮಾರ ಸ್ವಾಮೀಜಿಗಳ ಜನ್ಮದಿನೋತ್ಸಕ್ಕೆಂದು ಬರುತ್ತಿದ್ದರು. ಅದರಂತೆ ಶ್ರೀಗಳ 119ನೇ ಜನ್ಮದಿನೋತ್ಸ ಕಾರ್ಯಕ್ರದಲ್ಲಿ ಪಾಲ್ಗೊಳ್ಳಲು ಸ್ನೇಹಿತರೊಂದಿಗೆ ನಿನ್ನೆ (ಮಾರ್ಚ್ 31) ರಾತ್ರಿ ಸಿದ್ಧಗಂಗಾ ಮಠಕ್ಕೆ ಬಂದಿದ್ದರು. ಆದ್ರೆ, ದುರದೃಷ್ಟವಶಾತ್ ಇಂದು (ಏಪ್ರಿಲ್ 01) ಶೌಚಾಲಯಕ್ಕೆ ಹೋಗಿ ಬರುವಾಗ ಶಿವಕುಮಾರ ಶ್ರೀಗಳ ಗದ್ದುಗೆ ಹಿಂಭಾಗದಲ್ಲಿ ಏಕಾಏಕಿ ಎದೆನೋವು ಕಾಣಿಸಿಕೊಂಡು ಕುಸಿದುಬಿದ್ದು ಸಾವನ್ನಪ್ಪಿದ್ದಾರೆ.

ಪ್ರತಿವರ್ಷ ಶಿವಕುಮಾರ ಶ್ರೀಗಳ ಕಾರ್ಯಕ್ರಮಕ್ಕೆ ಬರುತ್ತಿದ್ದ ನಟರಾಜ್ ಅವರಿಗೆ ಕೆಲ ದಿನಗಳ ಹಿಂದೆ ಹಾರ್ಟ್​ ಸರ್ಜರಿತಾಗಿತ್ತು ಎಂದು ತಿಳಿದುಬಂದಿದೆ. ಇನನ್ಉ ಘಟನಾ ಸ್ಥಳಕ್ಕೆ ಕ್ಯಾತಸಂದ್ರ ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *