ಲಿವ್-ಇನ್ ಸಂಬಂಧದ ಜಗಳ: ಯುವತಿ ನೇಣಿಗೆ ಶರಣು
ಬೆಂಗಳೂರು: ಕೊಡಿಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಸಂಜೀವಿನಿ ನಗರದಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಮೃತರನ್ನು ಮೇಘಾಲಯ ಮೂಲದ ಅಗತ ಬೈತಿಯಂಗುಂ (34) ಎಂದು ಗುರುತಿಸಲಾಗಿದೆ. ಅವರು ಮಾನ್ಯತಾ ಟೆಕ್ ಪಾರ್ಕ್‌ನಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದರು.
ಮಣಿಪುರ ಮೂಲದ ನವಾಜ್ ಶರೀಫ್ (26) ಜೊತೆ ಅಗತ ಕಳೆದ ಮೂರು ವರ್ಷಗಳಿಂದ ಲಿವ್-ಇನ್ ಸಂಬಂಧದಲ್ಲಿದ್ದರು. ಇಬ್ಬರ ನಡುವೆ ವಯಸ್ಸಿನ 8 ವರ್ಷದ ಅಂತರವಿತ್ತು.ಪ್ರಿಯಕರ ಇತರರೊಂದಿಗೆ ಫೋನ್‌ನಲ್ಲಿ ಮಾತನಾಡುತ್ತಿದ್ದಾನೆ ಎಂಬ ಅನುಮಾನದಿಂದ ಪದೇ ಪದೇ ಜಗಳ ನಡೆಯುತ್ತಿತ್ತು ಎಂದು ತಿಳಿದುಬಂದಿದೆ.ಬುಧವಾರ ರಾತ್ರಿ ಜಗಳದ ನಂತರ ನವಾಜ್ ಮನೆಯಿಂದ ಹೊರಹೋಗಿದ್ದಾಗ, ಅಗತ ಮನೆಯ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ನವಾಜ್ ಮರಳಿ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಕೊಡಿಗೇಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿದ್ದಾರೆ.ಮೂರು ವರ್ಷಗಳ ಸಂಬಂಧ ದುರಂತ ಅಂತ್ಯ ಕಂಡಿರುವ ಘಟನೆ ಸ್ಥಳೀಯರಲ್ಲಿ ಆಘಾತ ಮತ್ತು ವಿಷಾದಕ್ಕೆ ಕಾರಣವಾಗಿದೆ.
For More Updates Join our WhatsApp Group :




