ಹಾಸನ: ಇಂದು ಟ್ರೈನಿಂಗ್ ಮುಗಿದಿತ್ತು. ನಾಳೆ ಡಿವೈಎಸ್‌ಪಿಯಾಗಿ ಅಧಿಕಾರ ಸ್ವೀಕರಿಸಬೇಕಿತ್ತು. ಇಂತಹ ಹೊತ್ತಿನಲ್ಲೇ ಅಧಿಕಾರಿ ಬಾಳಲ್ಲಿ ವಿಧಿಯಾಟವಾಡಿದೆ. ಡ್ಯೂಟಿ ರಿಪೋರ್ಟ್‌ಗೆ ಬಂದ ದಿನವೇ ಪ್ರೊಬೇಷನರಿ ಐಪಿಎಸ್ (IPS Probationer) ಅಧಿಕಾರಿ ಹರ್ಷವರ್ಧನ್, ಹಾಸನ ಬಳಿ (Hassan Accident) ಭೀಕರ ರಸ್ತೆ ಅಪಘಾತದಲ್ಲಿ ದುರಂತ ಅಂತ್ಯ ಕಂಡಿದ್ದಾರೆ
ಹರ್ಷವರ್ಧನ್ ಅವರು ಮೈಸೂರಿನಲ್ಲಿರುವ ಕರ್ನಾಟಕದ ಪೊಲೀಸ್ ಅಕಾಡೆಮಿಯಲ್ಲಿ ಟ್ರೈನಿಂಗ್ ಮುಗಿಸಿದ್ದರು. ಬಳಿಕ ಐಜಿಪಿ ಬೋರಲಿಂಗಯ್ಯ ರಿಪೋರ್ಟ್ ಮಾಡಿಕೊಂಡಿದ್ದರು. ನಾಳೆ ಡಿವೈಎಸ್ಪಿ ಆಗಿ ಚಾರ್ಜ್ ತೆಗೆದುಕೊಳ್ಳಬೇಕಿತ್ತು. ಅದು ಸಾಧ್ಯವಾಗಲಿಲ್ಲ.
ಮೂಲತಃ ಬಿಹಾರ ಮೂಲದ ಹರ್ಷವರ್ಧನ್ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ವಾಸವಾಗಿದ್ದರು. ಮಧ್ಯಪ್ರದೇಶದ ಐಇಟಿಯಲ್ಲಿ ಡಿಎವಿಇ ಎಂಜಿನಿಯರಿಂಗ್ ಪದವಿ ಮಾಡಿದ್ದರು. 2022-23 ರ ಐಪಿಎಸ್ ಬ್ಯಾಚ್‌ನಲ್ಲಿ ತೇರ್ಗಡೆ ಹೊಂದಿ ಕರ್ನಾಟಕ ಕೇಡರ್‌ನಲ್ಲಿ ರಾಜ್ಯಕ್ಕೆ ಆಯ್ಕೆಯಾಗಿದ್ದರು.