ಕೋಲಾರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕದಾದ್ಯಂತ ಸಾರಿಗೆ ನಿಗಮಗಳ ನೌಕರರು ಮುಷ್ಕರ ನಡೆಸುತ್ತಿದ್ದು, ರಾಜ್ಯದ ಹಲವೆಡೆ ಕೆಎಸ್ಆರ್ಟಿಸಿ ಸೇರಿ ಸಾರಿಗೆ ನಿಗಮಗಳ ಬಸ್ ಸಂಚಾರ ಭಾಗಶಃ ಸ್ಥಗಿತಗೊಂಡಿದೆ.

ಕೋಲಾರ ನಗರದ ಬಸ್ ನಿಲ್ದಾಣದಲ್ಲಿ ಕೆಎಸ್ಆರ್ಟಿಸಿ ಬಸ್ ಮೇಲೆ ಕಲ್ಲು ತೂರಾಟ ನಡೆದಿದೆ. ಮುಂಜಾನೆಯಿಂದ ಕೋಲಾರದಲ್ಲಿ ಬಸ್ ನಿಲ್ದಾಣ ಸ್ತಬ್ದವಾಗಿತ್ತು. 10 ಗಂಟೆ ವೇಳೆಗೆ ಅಧಿಕಾರಿಗಳು ಒಂದೆರಡು ಬಸ್ಸುಗಳನ್ನು ನಿಲ್ದಾಣಕ್ಕೆ ಕಳುಹಿಸಿದ್ದಾರೆ. ಈ ವೇಳೆ ಕಿಡಿಗೇಡಿಯಿಂದ ಕಲ್ಲು ತೂರಾಟ ನಡೆದಿದ್ದು, ಬಸ್ಸಿನ ಕಿಟಿಕಿ ಗಾಜು ಪುಡಿಯಾಗಿದೆ.
For More Updates Join our WhatsApp Group :