‘ಕರಿಯ 2’, ‘ಗಣಪ’, ‘ಕೆಂಪ’ ಇನ್ನೂ ಕೆಲ ಸಿನಿಮಾಗಳಲ್ಲಿ ನಟಿಸಿರುವ ನಟ ಸಂತೋಷ್ ಬಾಲರಾಜ್ ನಿಧನ ಹೊಂದಿದ್ದರು. ಕಳೆದ ಕೆಲ ದಿನಗಳಿಂದಲೂ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ ಜಾಂಡೀಸ್ ಆಗಿತ್ತು. ಬನಶಂಕರಿಯ ಸಾಗರ್ ಅಪೊಲೊ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು.
‘ಕರಿಯ 2’, ‘ಗಣಪ’ ಸೇರಿದಂತೆ ಇನ್ನೂ ಕೆಲ ಸಿನಿಮಾಗಳಲ್ಲಿ ನಟಿಸಿದ್ದ ನಟ ಸಂತೋಷ್ ಬಾಲರಾಜ್ ನಿಧನ ಹೊಂದಿದ್ದಾರೆ. ಅವರಿಗೆ 38 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಕೆಲ ದಿನಗಳ ಹಿಂದಷ್ಟೆ ಬನಶಂಕರಿಯ ಸಾಗರ್ ಅಪೋಲೊ ಆಸ್ಪತ್ರೆಗೆ ಅವರು ಚಿಕಿತ್ಸೆಗಾಗಿ ದಾಖಲಾಗಿದ್ದರು. ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದ ಕಾರಣ, ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸಂತೋಷ್ ಬಾಲರಾಜ್ ನಿಧನ ಹೊಂದಿದ್ದಾರೆ.
ಸಂತೋಷ್ ಬಾಲರಾಜ್ ಅವರಿಗೆ ಜಾಂಡೀಸ್ ಆಗಿತ್ತು. ಜಾಂಡೀಸ್ ಖಾಯಿಲೆ ಬಾಲರಾಜ್ ಅವರ ದೇಹವನ್ನೆಲ್ಲ ಆವರಿಸಿತ್ತು. ಕಳೆದ ಎರಡು ದಿನದಿಂದಲೂ ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿತ್ತು. ಯಕೃತ್ತು ಮತ್ತು ಕಿಡ್ನಿಯ ಸಮಸ್ಯೆಯಿಂದಾಗಿ ಅವರಿಗೆ ಜಾಂಡೀಸ್ ತಗುಲಿತ್ತು. ಈ ಮೊದಲೂ ಸಹ ಸಂತೋಷ್ ಬಾಲರಾಜ್ ಅವರು ಜಾಂಡೀಸ್ನಿಂದ ಬಳಲಿದ್ದರು. ಆಗ ಚಿಕಿತ್ಸೆ ಪಡೆದುಕೊಂಡಿದ್ದರು. ಆದರೆ ಈ ಬಾರಿ ಪರಿಸ್ಥಿತಿ ಕೈ ಮೀರಿ ಹೋಗಿತ್ತು. ಸಂತೋಷ್ ಅವರಿಗೆ ಮದುವೆ ಆಗಿರಲಿಲ್ಲ. ತಾಯಿ ಮತ್ತು ಸಹೋದರಿ ಇದ್ದರು.
‘ಕೆಂಪ’ ಸಿನಿಮಾ ಮೂಲಕ ಸಂತೋಷ್ ಬಾಲಕರಾಜ್ ಚಿತ್ರರಂಗ ಪ್ರವೇಶಿಸಿದ್ದರು. ಆ ಬಳಿಕ ಅವರು ‘ಕರಿಯ 2’, ‘ಜನ್ಮ’ ಮತ್ತು ‘ಗಣಪ’ ಸಿನಿಮಾಗಳಲ್ಲಿ ನಟಿಸಿದರು. ದರ್ಶನ್ ನಟನೆಯ ‘ಕರಿಯ’ ಸಿನಿಮಾದ ನಿರ್ಮಾಪಕ ಅನೆಕಲ್ ಬಾಲರಾಜ್ ಅವರ ಪುತ್ರ ಸಂತೋಷ್ ಬಾಲರಾಜ್, ಆನೆಕಲ್ ಬಾಲರಾಜ್ ಅವರು ಕಳೆದ ವರ್ಷವಷ್ಟೆ ನಿಧನ ಹೊಂದಿದರು. ಈಗ ಸಂತೋಷ್ ಸಹ ಇಹಲೋಕ ತ್ಯಜಿಸಿದ್ದಾರೆ. ಸಂತೋಷ್ ನಟನೆಯ ‘ಬರ್ಕ್ಲಿ’ ಮತ್ತು ‘ಸತ್ಯಂ’ ಸಿನಿಮಾಗಳು ಬಿಡುಗಡೆ ಆಗಬೇಕಿವೆ.
For More Updates Join our WhatsApp Group :