ಹವಾಮಾನ ವೈಪರೀತ್ಯದಿಂದ ಕೈಕೊಟ್ಟ ಮಾವು ಬೆಳೆ.
ರಾಮನಗರ: ಮಾವು ಬೆಂಗಳೂರು ದಕ್ಷಿಣ ಜಿಲ್ಲೆಯ ರೈತರ ಪ್ರಮುಖ ಬೆಳೆ. ರಾಜ್ಯದಲ್ಲಿಯೇ ಮಾವು ಬೆಳೆಗೆ ಎರಡನೇ ಸ್ಥಾನದಲ್ಲಿದೆ. ಈ ಬಾರಿ ಉತ್ತಮ ಬೆಳೆಯ ನಿರೀಕ್ಷೆಯಲ್ಲಿ ಜಿಲ್ಲೆಯ ರೈತರಿದ್ದರು. ಆದರೆ ಹವಮಾನ ವೈಪರೀತ್ಯದಿಂದಾಗಿ ಮಾವು ಬೆಳೆ ರೈತರಿಗೆ ಕೈಕೊಟ್ಟಿದೆ. ಹೀಗಾಗಿ ಉತ್ತಮ ಬೆಳೆ ಬರುವ ನಿರೀಕ್ಷೆಯಲ್ಲಿದ್ದ ರೈತರು ಕಂಗಾಲಾಗಿದ್ದಾರೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ಪ್ರಮುಖ ತೋಟಗಾರಿಕಾ ಬೆಳೆಯಾದ ಮಾವು ಸದ್ಯ ರೈತರಿಗೆ ಕೈಕೊಟ್ಟಿದೆ. ಅಂದಹಾಗೆ ಈ ಬಾರಿ ಜಿಲ್ಲೆಯಾದ್ಯಂತ ಮಾವಿನ ಮರಗಳಲ್ಲಿ ವ್ಯಾಪಕವಾಗಿ ಹೂ ಬಿಟ್ಟಿತ್ತು. ಹೀಗಾಗಿ ಜಿಲ್ಲೆಯ ಮಾವು ಬೆಳೆಗಾರರು ಉತ್ತಮ ಬೆಳೆ ಬರುವ ನಿರೀಕ್ಷೆಯಲ್ಲಿ ಇದ್ದರು. ಆದರೆ ಹವಾಮಾನ ವೈಪರಿತ್ಯದಿಂದಾಗಿ ಹೂ ಹಾಳಾಗಿ ಕಾಯಿ ಕಟ್ಟಿಲ್ಲ. ಸರಿಯಾದ ಇಬ್ಬನಿ ಬೀಳದೆ, ಮಳೆ ಕೂಡ ಬಾರದೇ ಮರಗಳಲ್ಲಿ ಕಾಯಿ ಕಟ್ಟಿಲ್ಲ. ಅರ್ಧದಷ್ಟು ಬೆಳೆಕೂಡ ಕೈಕೊಟ್ಟಿದೆ.
ಬೆಂಗಳೂರು ದಕ್ಷಿಣ ಜಿಲ್ಲೆಯಾದ್ಯಂತ 26 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆಯನ್ನ ಬೆಳೆಯಲಾಗುತ್ತದೆ. ರಾಜ್ಯದಲ್ಲಿ ಮಾವು ಬೆಳೆಯಲ್ಲಿ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಜಿಲ್ಲೆಯ ರಾಮನಗರ, ಕನಕಪುರ, ಚನ್ನಪಟ್ಟಣ ಹಾಗೂ ಮಾಗಡಿ ತಾಲ್ಲೂಕುಗಳಲ್ಲಿ ರೈತರು ಮಾವು ಬೆಳೆಯನ್ನು ಹೆಚ್ಚಾಗಿ ಬೆಳೆಯುತ್ತಾರೆ. ಬಾದಾಮಿ, ಸೇಂದೂರ, ನೀಲಂ, ಮಲ್ಲಿಕಾ, ಮಲಗೋಬ ಸೇರಿದಂತೆ ಮೊದಲಾದ ತಳಿಯನ್ನ ಬೆಳೆಯಲಾಗುತ್ತದೆ.
ಒಟ್ಟಾರೆ ಕಳೆದ ಬಾರಿ ಉತ್ತಮ ಬೆಳೆ ಬಂದಿದ್ದರು, ಸರಿಯಾದ ಬೆಲೆ ಸಿಗದ ಕಾರಣ ಮಾವು ಬೆಳೆಗಾರರು ಸಾಕಷ್ಟು ಸಂಕಷ್ಟ ಎದುರಿಸಿದ್ದರು. ಆದರೆ ಈ ಬಾರಿ ಬೆಳೆಯೇ ಸರಿಯಾಗಿ ಬಾರದೇ ಮತ್ತೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
For More Updates Join our WhatsApp Group :




