ತುಮಕೂರು: ಪತ್ನಿಯನ್ನು ಮಚ್ಚಿನಿಂದ ಬರ್ಬರವಾಗಿ ಕೊಲೆಗೈದಿದ್ದ ಆರೋಪಿಗೆ ಮಧುಗಿರಿ ೪ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಪಾವಗಡ ಪಟ್ಟಣದ ನಿರೀಕ್ಷಣಾ ಮಂದಿರದ ಮುಂಭಾಗ ಮಾರ್ಚ್ 23, 2023 ರಂದು ಪತ್ನಿ ಕವಿತಾ ಅವರನ್ನು ಪಾವಗಡ ತಾಲ್ಲೂಕಿನ ವೆಂಕಟಾಪುರ ಗ್ರಾಮದ ಆರೋಪಿ ಬಾಲಾಜಿ ಮಚ್ಚಿನಿಂದ ಕೊಲೆಗೈದಿದ್ದ. ಈ ಸಂಬOಧ ಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸ್ ಇನ್ಸ್ಪೆಕ್ಟರ್ ವೆಂಕಟೇಶ್ ಅವರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆಯು ಮಧುಗಿರಿ ನಾಲ್ಕನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ನಡೆದು ನ್ಯಾಯಾಧೀಶರಾದ ಕರಕೆರೆ ಅವರು ಆರೋಪಿ ಬಾಲಾಜಿಗೆ ಮೇಲ್ಕಂಡಂತೆ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ಪ್ರಕಟಿಸಿದರು. ಸರ್ಕಾರದ ಪರವಾಗಿ ಸರ್ಕಾರಿ ವಕೀಲ ಬಿ.ಎ. ನಿರಂಜನಮೂರ್ತಿ ವಾದ ಮಂಡಿಸಿದ್ದರು.