ತುಮಕೂರು: ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ವಿದ್ಯಾರ್ಥಿನಿಲಯಗಳ 2024-25ನೇ ಸಾಲಿನ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಹಿಂದಿನ ಎಸ್.ಹೆಚ್.ಪಿ ಪೋರ್ಟಲ್ ಬದಲಾಗಿ ಇಲಾಖೆಯ ಹೆಚ್.ಎಂ.ಐ.ಎಸ್ ತಂತ್ರಾAಶದ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಹ ಸರ್ಕಾರಿ ಮೆಟ್ರಿಕ್ ಪೂರ್ವ/ನಂತರದ ತರಗತಿ/ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ/ಪಂಗಡ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಜಾಲತಾಣ WWW.SWD.Kar.nic.in ನಲ್ಲಿ ಹೆಚ್.ಎಂ.ಐ.ಎಸ್ ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಬಹುದು.
ತಂತ್ರಾAಶದಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇದ್ದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಮ್ಯಾನುಯಲ್ ಅರ್ಜಿಯನ್ನು ಜುಲೈ 15ರೊಳಗಾಗಿ ನಿಲಯಪಾಲಕರಿಗೆ ನೀಡಿ ಪ್ರವೇಶಾತಿಯನ್ನು ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಬAಧಪಟ್ಟ ತಾಲ್ಲೂಕು ಸಹಾಯಕ ನಿರ್ದೇಶಕರು/ ನಿಲಯಪಾಲಕರನ್ನು ಸಂಪರ್ಕಿಸಬೇಕೆAದು ಜಂಟಿ ನಿರ್ದೇಶಕ ಕೃಷ್ಣಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ