ತುಮಕೂರು : ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮವು ವಿವಿಧ ಯೋಜನೆಯಡಿ ಸಾಲ ಸೌಲಭ್ಯ ಕಲ್ಪಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯಗಳ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ.
ಉದ್ಯಮಶೀಲತಾ, ಸಾರಥಿ, ಸ್ವಯಂ ಉದ್ಯೋಗ ನೇರಸಾಲ, ಮೈಕ್ರೋ ಕ್ರೆಡಿಟ್(ಪ್ರೇರಣಾ), ಗಂಗಾಕಲ್ಯಾಣ ಹಾಗೂ ಭೂ ಒಡೆತನ ಯೋಜನೆಗಳಡಿ ಸಾಲ ಸೌಲಭ್ಯ ಒದಗಿಸಲಾಗುವುದು. ಆಸಕ್ತರು ಕರ್ನಾಟಕ ಒನ್, ಗ್ರಾಮಒನ್, ತುಮಕೂರು ಒನ್ನಲ್ಲಿ ಅಕ್ಟೋಬರ್ 1೦ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ.೦816-2278139ನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.