ತುಮಕೂರು : 50 ವರ್ಷದ ವಿವಾಹಿತನ ಜತೆ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

ತುಮಕೂರು: ಮೂರು ದಿನಗಳ ಹಿಂದೆ 50 ವರ್ಷದ ವಿವಾಹಿತ ಪುರುಷನೊಂದಿಗೆ 19 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆಯಾಗಿದ್ದು, ಶನಿವಾರ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆಯ ಬಳಿ ಅವರು ಚಪ್ಪಲಿಗಳು ಪತ್ತೆಯಾಗಿವೆ.

ಕೆರೆಯ ಬಳಿ ಕಾರು ನಿಲ್ಲಿಸಿ ಮೊಬೈಲ್​ಗಳನ್ನು ಕಾರಿನಲ್ಲಿಟ್ಟು ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ.

ಕೋಳಾಲ ಹೋಬಳಿ ಲಕ್ಕಯ್ಯನಪಾಳ್ಯದ ಅನನ್ಯ(19) ಎಂಬ ಕಾಲೇಜು ವಿದ್ಯಾರ್ಥಿನಿ, ಬೈರಗೊಂಡ್ಲು ಗ್ರಾಮದ ರಂಗಶಾಮಣ್ಣ(50) ಎಂಬ ವಿವಾಹಿತ ಪುರುಷನೊಂದಿಗೆ ಕಳೆದ ಮೂರು ದಿನಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದಳು

ವಿವಾಹಿತ ವ್ಯಕ್ತಿಯೊಂದಿಗೆ ಯುವತಿ ಪ್ರೇಮಕ್ಕೆ ಅವರ ಕುಟುಂಬದವರ ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಕೆರೆಯಲ್ಲಿ ಬೋಟ್ ಸಹಾಯದಿಂದ ಹುಡುಕಾಟ ನಡೆಸಿದ್ದಾರೆ. ಜೊತೆಗೆ ಈಜು ಪಟುಗಳನ್ನು ಕರೆಯಿಸಿ ಕೆರೆಯಲ್ಲಿ ಇಬ್ಬರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಸ್ಥಳದಲ್ಲಿ ಕೊರಟಗೆರೆ ಪೊಲೀಸ್ ಠಾಣೆಯ ಸಿಪಿಐ ಅನಿಲ್, ಕೊಳಾಲ ಪಿಎಸ್‌ಐ ರೇಣುಕಾ ಯಾದವ್ ಹಾಗೂ ಯೋಗೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.

Leave a Reply

Your email address will not be published. Required fields are marked *