ತುಮಕೂರು: ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು, ಮಂಡ್ಯ ಮೂಲದ ಬುಲೆರೋ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ಪಾವಗಡ ಪಟ್ಟಣದ ತುಮಕೂರು ರಸ್ತೆಯ ಎಸ್ ಆರ್ ಎಸ್ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಮಂಗಳವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಬುಲೆರೋ ವಾಹನದ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಮೃತ ವ್ಯಕ್ತಿಯನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದ ಪುಟ್ಟಸ್ವಾಮಿ ಎನ್ನುವರ ಮಗ 21 ವರ್ಷದ ಗಿರೀಶ್ ಎಂದು ಗುರುತಿಸಲಾಗಿದೆ.
ತುಮಕೂರು ರಸ್ತೆಯಿಂದ ಪಾವಗಡದ ಕಡೆ ಬರುತ್ತಿದ್ದಂತಹ ಬುಲೆರೋ ಮುಂಭಾಗದಲ್ಲಿ ಹೋಗುತ್ತಿದ್ದ ಲಾರಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.
ಲಾರಿಯ ಮುಂಭಾಗದಲ್ಲಿ ಓಮನಿಯೊಂದು ತೆರಳುತ್ತಿದ್ದು ಇದ್ದಕ್ಕಿದ್ದಂತೆ ಓಮಿನಿ ಯ್ಯೂಟರ್ನ್ ತೆಗೆದುಕೊಂಡಿದ್ದು ಲಾರಿ ಚಾಲಕ ತನ್ನ ವೇಗವನ್ನು ಕಡಿಮೆ ಮಾಡಿದ್ದಾನೆ, ಹಿಂದೆಯಿಂದ ಬರುತ್ತಿದ್ದ ಬುಲೆರೋ ವಾಹನ ವೇಗವಾಗಿ ಬಂದು ಲಾರಿಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ,
ಸ್ಥಳಕ್ಕೆ ಪಾವಗಡ ಪೊಲೀಸ್ ಠಾಣೆಯ ಪಿಎಸ್ಐ ಗುರುನಾಥ ಭೇಟಿ ನೀಡಿ ಮುಂದಿನ ಕ್ರಮಗಳನ್ನು ಕೈಗೊಂಡಿದ್ದಾರೆ.