ತುಮಕೂರು: ರಾಜ್ಯದ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು.
‘ರಾಜ್ಯಕ್ಕೆ ದಕ್ಷಿಣ ಹಾಗೂ ಉತ್ತರ ಭಾರತದ ಇತರ ರಾಜ್ಯಗಳಿಂದ ವಲಸೆ ಬರುತ್ತಿದ್ದಾರೆ.
ವಲಸೆ ಪ್ರಮಾಣ ಪ್ರತಿ ವರ್ಷ ಹೆಚ್ಚುತ್ತಿದೆ. ಇದರಿಂದ ಕನ್ನಡಿಗರಿಗೆ ಉದ್ಯೋಗ ಸಿಗುತ್ತಿಲ್ಲ. ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು. ಖಾಸಗಿ ಸಂಸ್ಥೆಗಳಲ್ಲೂ ಕನ್ನಡಿಗರಿಗೆ ಅವಕಾಶ ಕಲ್ಪಿಸಬೇಕು. ನೌಕರಿ ನೀಡದ ಸಂಸ್ಥೆಗಳಿಗೆ ದಂಡ ವಿಧಿಸಬೇಕು’ ಎಂದು ಪ್ರತಿಭಟನಕಾರರು ಒತ್ತಾಯಿಸಿದರು.
ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಆರ್.ರಂಗಸ್ವಾಮಿ, ಪದಾಧಿಕಾರಿಗಳಾದ ಸುನೀತಾ ಮೂರ್ತಿ, ಟಿ.ಎ.ಕಾಂತರಾಜು, ಎನ್.ಎಸ್.ವಿಷ್ಣುವರ್ಧನ್, ಮೋಹನ್ಕುಮಾರ್, ಯೋಗೀಶ್ಗೌಡ, ಅಬ್ಬಾಸ್, ಶಿವಕುಮಾರ್, ಕಿಶೋರ್ ಮುಂತಾದವರು ಪಾಲ್ಗೊಂಡಿದ್ದರು.