ತುಮಕೂರು:- ಮಡಕಶಿರಾ ಪಟ್ಟಣದ ಮಾರುತಿ ನಗರದ ಶ್ರೀ ಅಭಯಾಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ 25 ನೇ ತಾರೀಕಿನಂದು ಭೀಕರ ಅಪಘಾತ ಸಂಭವಿಸಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಭಾನುವಾರ ಮಧ್ಯಾನ್ಹ ಮೂರು ಗಂಟೆಯಲ್ಲಿ ಸಿಸಿಟಿವಿಯಲ್ಲಿ ಸರಿಯಾಗಿದ್ದ ದೃಶ್ಯಾವಳಿ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಪಾವಗಡದಿಂದ ಮಧುಗಿರಿ ಕಡೆಗೆ ಪ್ರಯಾಣಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನಿಗೆ ಫಿಟ್ಸ್ ಬಂದ ಕಾರಣ ಬಸ್ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ಹಾಗೂ ಆಟೋಗೆ ಡಿಕ್ಕಿ ಹೊಡೆದಿದೆ.
ಅಪಘಾತ ವಿವರ: ಘಟನೆಯಲ್ಲಿ ಕುಡನಹಳ್ಳಿ ಗ್ರಾಮದ ನಿವಾಸಿ ನಾರಾಯಣಪ್ಪ ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಬಸ್ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ನಾರಾಯಣಪ್ಪ ಅವರನ್ನು ಮಡಕಶಿರಾ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಹಿಂದೂಪುರಕ್ಕೆ ರವಾನಿಸಲಾಗಿದೆ.
ಬಸ್ ಚಾಲಕನಿಗೂ ಗಾಯಗಳಾಗಿದ್ದು, ಅವರನ್ನು ಮಡಕಶಿರಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಈ ಪ್ರಕರಣ ಮಡಕಸಿರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದ್ದು ಮರಕಶಿರಾ ಪೊಲೀಸರು ಬಸ್ಸನ್ನ ಜಪ್ತಿ ಮಾಡಿದ್ದಾರೆ.
ಈ ಘಟನೆ ಸ್ಥಳೀಯರ ಅಸಮಾಧಾನಕ್ಕೆ ಕಾರಣವಾಗಿದ್ದು, ಅಪಘಾತದ ಬಗ್ಗೆ ತನಿಖೆ ಮುಂದುವರಿಯುತ್ತಿದೆ.