ತುಮಕೂರು || ಗೃಹ ಸಚಿವ Parameshwara ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ E.D ದಾಳಿ

Bhairati Basavaraj ಕೈವಾಡ ಇದೆ ಎಂದವರೇ ಈಗ ಅವರ ಪಾತ್ರವೇನೂ ಇಲ್ಲವೆನ್ನುತ್ತಿದ್ದಾರೆ: Param

ತುಮಕೂರು: ಕರ್ನಾಟಕ ಗೃಹ ಸಚಿವ ಡಾ. ಜಿ ಪರಮೇಶ್ವರ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ. ತುಮಕೂರಿನ ಹೆಗ್ಗೆರೆ ಬಳಿಯಿರುವ ಸಿದ್ದಾರ್ಥ ಮೆಡಿಕಲ್ ಕಾಲೇಜು, ತುಮಕೂರಿನ ಎಸ್ಎಸ್ಐಟಿ ಕಾಲೇಜಿನ ಮೇಲೆ ಇಡಿ ದಾಳಿ ನಡೆದಿದೆ. ಅಲ್ಲದೆ, ನೆಲಮಂಗಲದ ಟಿ.ಬೇಗೂರಿನಲ್ಲಿರುವ ಕಾಲೇಜಿನ ಮೇಲೂ ರೇಡ್ ಮಾಡಲಾಗಿದೆ. ಸದ್ಯ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ತುಮಕೂರಿನ ಹೆಗ್ಗೆರೆ ಬಳಿಯಿರುವ ಸಿದ್ದಾರ್ಥ ಮೆಡಿಕಲ್ ಕಾಲೇಜು ಸೇರಿದಂತೆ ಕರ್ನಾಟಕ ಗೃಹ ಸಚಿವ ಡಾ. ಜಿ ಪರಮೇಶ್ವರ ಒಡೆತನದ ಹಲವು ಶಿಕ್ಷಣ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ ಬೆಳಗ್ಗೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇದರೊಂದಿಗೆ, ಪರಮೇಶ್ವರ್ ಅವರಿಗೆ ಮತ್ತೊಮ್ಮೆ ಇಡಿ ಶಾಕ್ ನೀಡಿದೆ.

ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಎಸ್ಎಸ್ಐಟಿ ಕಾಲೇಜಿನ ಮೇಲೆ ಇಡಿ ದಾಳಿ ನಡೆದಿದೆ. ಮೂರು ಕಾರುಗಳಲ್ಲಿ ಬಂದ ಹತ್ತಕ್ಕೂ ಹೆಚ್ಚು ಅಧಿಕಾರಿಗಳು ಎಸ್ಎಸ್ಐಟಿ ಕಾಲೇಜಿನಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ, ಮಾಧ್ಯಮ ಪ್ರತಿನಿಧಿಗಳು ಕಾಲೇಜು ಆವರಣದ ಒಳಗೆ ಬಾರದಂತೆ ಡಿವೈಎಸ್ಪಿ ತಾಕೀತು ಮಾಡಿದ್ದಾರೆ. ಅಲ್ಲದೆ, ಡಿವೈಎಸ್ಪಿ ನೇತೃತ್ವದಲ್ಲಿ ಕಾಲೇಜಿಗೆ ಭದ್ರತೆ ಒದಗಿಸಲಾಗಿದೆ.

ತುಮಕೂರು || ಗೃಹ ಸಚಿವ ಡಾ. ಜಿ. ಪರಮೇಶ್ವರ್ ಕಾಲೇಜು ಮೇಲೆ ಇಡಿ ದಾಳಿ

2019ರಲ್ಲಿ ಸಿದ್ದಾರ್ಥ ಶಿಕ್ಷಣ ಸಂಸ್ಥೆ ಮೇಲೆ ಐಟಿ ದಾಳಿ ನಡೆದಿತ್ತು. ಆಗ ವೈದ್ಯಕೀಯ ಸೀಟು ಅಕ್ರಮ ಹಂಚಿಕೆ ಆರೋಪ ಸಂಬಂಧ ಐಟಿ ದಾಳಿ ನಡೆದಿತ್ತು. ಆ ಸಂದರ್ಭದಲ್ಲೇ ಪರಮೇಶ್ವರ್ ಆಪ್ತ ಆತ್ಮಹತ್ಯೆಗೆ ಶರಣಾಗಿದ್ದ. ಅದಾದ ನಂತರ ದಾಳಿ ಪ್ರಕ್ರಿಯೆ ನಿಲ್ಲಿಸಲಾಗಿತ್ತು. 2019ರ ದಾಳಿ ಬಳಿಕ ಐಟಿ ಅಧಿಕಾರಿಗಳು ಜಾರಿ ನಿರ್ದೇಶನಾಲಯಕ್ಕೆ ಮಾಹಿತಿ ನೀಡಿದ್ದರು. 2019ರ ಐಟಿ ದಾಳಿ ಸಂದರ್ಭದಲ್ಲಿ ಪರಮೇಶ್ವರ್ ಆಪ್ತ ಸಹಾಯಕ ರಮೇಶ್ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.

Leave a Reply

Your email address will not be published. Required fields are marked *