ತುಮಕೂರು || ಶ್ರೀ ಗುರುಕುಲ್ ನಲ್ಲಿ ವಿದ್ಯಾರ್ಥಿಗಳಿಗೆ ಫುಡ್‌ಫೆಸ್ಟ್ ಆಯೋಜನೆ | Tumkur Foodfest

ತುಮಕೂರು: ನಗರದ ಶ್ರೀ ಗುರುಕುಲ್ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ವರ್ಷದ ವಾಣಿಜ್ಯ ಮತ್ತು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಫುಡ್‌ಫೆಸ್ಟ್ ಅನ್ನು ಆಯೋಜಿಸಲಾಗಿತ್ತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಸೇವಿಯರ್ ಬೈಟ್ಸ್ನ ಮಾಲೀಕರಾದ ಮೋನಿಕ ಟಿ.ಎಸ್. ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಉತ್ತಮವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿವಿಧ ರೀತಿಯ ತಿಂಡಿಗಳನ್ನು ರುಚಿಯಾಗಿ ಹಾಗೂ ಶುಚಿಯಾಗಿ ತಯಾರಿಸಿದ್ದಾರೆ. ಇಂತಹ ಕಾರ್ಯಕ್ರಮಗಳನ್ನು ಕಾಲೇಜಿನಲ್ಲಿ ಆಯೋಜಿಸುವುದರಿಂದ ವಿದ್ಯಾರ್ಥಿಗಳಲ್ಲಿ ಇರುವ ಕ್ರಿಯಾಶೀಲ ಆಲೋಚನೆಗಳು ವ್ಯಾಪಾರದ ತಂತ್ರಗಳು ಹೊರಬರಲು ಕಾರಣವಾಗುತ್ತದೆ ಎಂದು ತಿಳಿಸಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಗುರುಕುಲ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಮಧು ಜಯಂತ್ ಟಿ.ಎಸ್. ವಹಿಸಿದ್ದರು. ಸಂಸ್ಥೆಯ ಕಾರ್ಯದರ್ಶಿ ರಶ್ಮಿ ಮಧು ಜೈನ್, ನಿರ್ದೇಶಕರಾದ ರಾಹುಲ್ ಬೆಳಗುಳಿ, ವಿಜಯ್ ಸೇವಿಯರ್ ಬೈಟ್ಸ್ ನ ಸದಸ್ಯರು, ಕಾಲೇಜಿನ ಪ್ರಾಂಶುಪಾಲರು ಉಪನ್ಯಾಸಕರು ಪಾಲ್ಗೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಸುಮಾರು ೨೪ ಹೆಚ್ಚು ತಂಡಗಳು ಭಾಗವಹಿಸಿ ವಿವಿಧ ರೀತಿಯ ತಿಂಡಿಗಳನ್ನು ಮಾಡುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *