ಕೊರಟಗೆರೆ | ಹರಿಯುತ್ತಿದ್ದ ನೀರಿನಲ್ಲಿ ಸಿಲುಕಿಕೊಂಡ ಬಾಲಕಿಯರು

ತುಮಕೂರು : ಮಳೆ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರು ಬಾಲಕಿಯರನ್ನು ರಕ್ಷಣೆ ಮಾಡುವಲ್ಲಿ ಸ್ಥಳೀಯ ಯುವಕರು ಯಶಸ್ವಿಯಾಗಿ ಮಾನವೀಯತೆ ಮೆರೆದಿದ್ದಾರೆ.

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತುಂಬಾಡಿ ಹೊಸಕೆರೆ ಕೋಡಿ ನೀರಿನಲ್ಲಿ ಇಬ್ಬರು ಬಾಲಕಿಯರು ಆಟವಾಡಲು ಇಳಿದಿದ್ದರು ಎನ್ನಲಾಗಿದೆ. ಈ ವೇಳೆಯಲ್ಲಿ ನೀರಿನ ರಭಸ ಹೆಚ್ಚಾಗಿದ್ದು ಇದಕ್ಕೆ ಸಿಲುಕಿಕೊಂಡ ಬಾಲಕಿಯರು ಕೊಚ್ಚಿ ಹೋಗುತ್ತಿದ್ದರು.

ಸ್ಥಳೀಯ ಯುವಕರು ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿ ಬಾಲಕಿಯರನ್ನು ರಕ್ಷಣೆ ಮಾಡಿದ್ದು, ಅದೃಷ್ಟವಶಾತ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇನ್ನು ತುಮಕೂರು ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು ಕೆರೆಕಟ್ಟೆಗಳು ತುಂಬಿ ಹರಿಯುತ್ತಿವೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಈ ಸಂದರ್ಭದಲ್ಲಿ ಪ್ರತಿಯೊಬ್ಬರೂ ಜಾಗೃತರಾಗಿ ಇರಬೇಕಾಗಿದೆ.

Pragati TV Social Connect for more latest u

Leave a Reply

Your email address will not be published. Required fields are marked *