ತುಮಕೂರು : ಸ್ಮಾರ್ಟ್ ಸಿಟಿ ತುಮಕೂರು ನಗರದಲ್ಲಿ ಅಪಘಾತ ಪ್ರಕರಗಳು ಹೆಚ್ಚಾಗುತ್ತಿದ್ದು, ಈಗ ಮತ್ತೊಂದು ಯುವಕನ ಭೀಕರ ಕೊಲೆ ಜನರನ್ನು ಬೆಚ್ಚಿಬೀಳಿಸಿದೆ.
ನಗರದ ಮರಳೂರುದಿಣ್ಣೆಯಲ್ಲಿ ಮತ್ತೆ ಪುಂಡರ ಅಟ್ಟಹಾಸ ಮುಂದುವರೆದಿದ್ದು, ಚಾಕುವಿನಿಂದ ಚುಚ್ಚಿ ಯುವಕನ ಕೊಲೆ ಮಾಡಲಾಗಿದೆ.
ಮನೆಯಲ್ಲಿ ಊಟ ಮಾಡುತ್ತಿದ್ದವನ್ನ ಕರೆಸಿ ಬರ್ಬರಿವಾಗಿ ಚಾಕುವಿನಿಂದ ಚುಚ್ಚಿ ಕೊಲೆ ಮಾಡಲಾಗಿದೆ. ತುಮಕೂರಿನ ಮರಳೂರುದಿಣ್ಣೆಯಲ್ಲಿ ಈ ಘಟನೆ ನಡೆದಿದ್ದು, ರಿಹಾನ್ ಪಾಷ 20 ಕೊಲೆಯಾದ ಯುವಕನಾಗಿದ್ದಾನೆ.
ಹುಡುಗಿ ವಿಚಾರಕ್ಕೆ ಕೊಲೆ ನಡೆದಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಮಾತಾಡಬೇಕು ಬಾ ಎಂದು ಕರೆಸಿ ಹೊಟ್ಟೆಭಾಗಕ್ಕೆ ಚಾಕು ಇರಿದು ಕೊಲೆ ಮಾಡಲಾಗಿದೆ.
ತೀವ್ರ ರಕ್ತಸ್ರಾವದಿಂದ ಯುವಕ ಕುಸಿದಿದ್ದಾನೆ. ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ.
ಮರಳೂರು ದಿಣ್ಣೆಯಲ್ಲಿ ಪದೇ ಪದೇ ಇಂತಹ ಘಟನೆ ನಡೆಯುತ್ತಿರುವದರಿಂದ ಈ ಭಾಗದ ಜನರಲ್ಲಿ ಭಯದ ವಾತಾವರಣ ಮೂಡಿದೆ. ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.