ತುಮಕೂರು: ತೋಟಗಾರಿಕೆ ವಿಶ್ವವಿದ್ಯಾಲಯ, ಪಾಲಿಟೆಕ್ನಿಕ್ ಕಾಲೇಜು ಆರಂಭ!

ತುಮಕೂರು: ರಾಜ್ಯ ಸರ್ಕಾರ ಮಂಡಿಸಿದ್ದ ಕಳೆದ ಮೂರು ಬಜೆಟ್ ಗಳಲ್ಲಿ ಜಿಲ್ಲೆಗೆ ಮಾಡಿದ್ದ ನಿರಾಸೆಯನ್ನು ಈ ಬಾರಿ ನೀಗಿಸುವ ಕೆಲಸ ಮಾಡಿದೆ. ಕೆಲವು ಪ್ರಮುಖ ಹೊಸ ಯೋಜನೆಗಳನ್ನು ನೀಡಿದ್ದರೆ, ಈಗಾಗಲೇ ಚಾಲ್ತಿಯಲ್ಲಿ ಇರುವ ಯೋಜನೆಗಳಿಗೆ ಹಣ ಒದಗಿಸಲಾಗಿದೆ.

ತಿಪಟೂರಿನಲ್ಲಿ ಹೊಸದಾಗಿ ತೋಟಗಾರಿಕೆ ಮಹಾವಿದ್ಯಾಲಯ ಆರಂಭ, ಚಿಕ್ಕನಾಯಕನಹಳ್ಳಿಯಲ್ಲಿ ನೂತನ ಪಾಲಿಟೆಕ್ನಿಕ್ ಕಾಲೇಜು ಸ್ಥಾಪನೆ ಮಾಡುವುದಾಗಿ ಬಜೆಟ್ ನಲ್ಲಿ ಘೋಷಿಸಲಾಗಿದೆ. ಆದರೆ ಅದಕ್ಕೆ ಎಷ್ಟು ಅನುದಾನ ಮೀಸಲಿಡಲಾಗಿದೆ ಎಂಬ ವಿಚಾರವನ್ನು ಪ್ರಸ್ತಾಪಿಸಿಲ್ಲ. ಹಣವನ್ನು ಮೀಸಲಿಟ್ಟರೆ ಮಾತ್ರ ಈ ಯೋಜನೆಗಳು ಕಾರ್ಯರೂಪಕ್ಕೆ ಬರಲಿವೆ. ಇಲ್ಲವಾದರೆ ಅನುದಾನಕ್ಕಾಗಿ ಮತ್ತೆ ಕಾಯಬೇಕಾಗುತ್ತದೆ.

ತುಮಕೂರಿನಲ್ಲಿ ಹೊಸದಾಗಿ ವಿಧಿ ವಿಜ್ಞಾನ ಪ್ರಯೋಗಾಲಯ ಆರಂಭಿಸುವುದಾಗಿ ಪ್ರಕಟಿಸಿದ್ದು, ಅದಕ್ಕಾಗಿ ₹10 ಕೋಟಿ ನೀಡುವ ಭರವಸೆ ಕೊಡಲಾಗಿದೆ. ತುಮಕೂರು ನಗರದಲ್ಲಿ 100 ಹಾಸಿಗೆ ಸಾಮರ್ಥ್ಯದ ‘ತುರ್ತು ನಿಗಾ ಘಟಕ’ ಆರಂಭಿಸುವುದಾಗಿ ಬಜೆಟ್ ನಲ್ಲಿ ಹೇಳಲಾಗಿದೆ. ಈ ಆಸ್ಪತ್ರೆ ನಿರ್ಮಾಣಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ ಎಂದು ಆರೋಗ್ಯ ಸಚಿವರು ಹೇಳಿಕೊಂಡಿದ್ದರು. ಈಗ ಮತ್ತೆ ಬಜೆಟ್ ನಲ್ಲಿ ಪ್ರಸ್ತಾಪಿಸಲಾಗಿದೆ.

ತುಮಕೂರು ನಗರದಲ್ಲಿ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥ ನಿರ್ಮಾಣ ಮಾಡಲು ಉದ್ದೇಶಿಸಿದ್ದು, ರಾಜ್ಯದ ಇತರೆಡೆಗಳಲ್ಲೂ ಸ್ಥಾಪಿಸಲಾಗುತ್ತಿದೆ.

ವಿದ್ಯುತ್ ಕ್ಷೇತ್ರ: ಪಾವಗಡ ತಾಲ್ಲೂಕಿನ ಸೋಲಾರ್ ಪಾರ್ಕ್ ನಲ್ಲಿ ₹48 ಕೋಟಿ ವೆಚ್ಚದಲ್ಲಿ ಬ್ಯಾಟರಿ ಶೇಖರಣೆ ವ್ಯವಸ್ಥೆಯನ್ನು ಹೊಂದಿದ 2 ಮೆಗಾವಾಟ್ ಸಾಮರ್ಥ್ಯದ ಸೌರ ಘಟಕವನ್ನು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ (ಕೆಆರ್ಇಡಿಎಲ್) ವತಿಯಿಂದ ಸ್ಥಾಪಿಸಲು ಉದ್ದೇಶಿಸಲಾಗಿದೆ. ಪ್ರಸಕ್ತ ಸಾಲಿನ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಈ ಯೋಜನೆ ಪ್ರಕಟಿಸಿದ್ದು, ಅದಕ್ಕೆ ಪೂರಕವಾಗಿ ರಾಜ್ಯದಲ್ಲೂ ಯೋಜನೆ ಕೈಗೆತ್ತಿಕೊಳ್ಳಲಾಗಿದೆ.

ಕೈಗಾರಿಕಾ ವಸಹತು: ಕೊರಟಗೆರೆ ತಾಲ್ಲೂಕಿನ ಬೈರಗೊಂಡನಹಳ್ಳಿ ಹಾಗೂ ಚಿಕ್ಕನಾಯಕನಹಳ್ಳಿಯಲ್ಲಿ ಹೊಸದಾಗಿ ಕೈಗಾರಿಕಾ ವಸಾಹತು ಸ್ಥಾಪಿಸಲು ಉದ್ದೇಶಿಸಲಾಗಿದೆ. ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ (ಕೆಎಸ್ಎಸ್ಐಡಿಸಿ) ವತಿಯಿಂದ ಈ ಯೋಜನೆ ಕಾರ್ಯರೂಪಕ್ಕೆ ಬರಲಿದೆ.

ರೈಲ್ವೆ ಯೋಜನೆಗೆ ಹಣ: ಕುಂಟಿತಗೊಂಡಿದ್ದ ತುಮಕೂರು- ದಾವಣಗೆರೆ ನೂತನ ರೈಲ್ವೆ ಮಾರ್ಗದ ನಿರ್ಮಾಣಕ್ಕೆ ಕೊನೆಗೂ ಬಜೆಟ್ ನಲ್ಲಿ ಅನುದಾನ ಒದಗಿಸಲಾಗಿದ್ದು, ಇದೇ ಮೊದಲ ಬಾರಿಗೆ ದೊಡ್ಡ ಮತ್ತದ ಹಣ ನೀಡಲಾಗಿದೆ. ₹220 ಕೋಟಿ ಹಣವನ್ನು ಬಜೆಟ್ ನಲ್ಲಿ ತೆಗೆದಿರಿಸಲಾಗಿದೆ. ಭೂ ಸ್ವಾಧೀನಕ್ಕೂ ಹಣವಿಲ್ಲದೆ ತೆವಳುತ್ತಾ ಸಾಗಿದ್ದ ತುಮಕೂರು- ರಾಯದುರ್ಗ ರೈಲ್ವೆ ಯೋಜನೆಗೂ ನೆರವು ಸಿಕ್ಕಿದ್ದು, ₹225 ಕೋಟಿ ಒದಗಿಸಲಾಗಿದೆ.

ಜಿಲ್ಲೆಯ ಎರಡು ಪ್ರಮುಖ ರೈಲ್ವೆ ಯೋಜನೆಗಳಿಗೆ ಈ ಬಾರಿಯ ಬಜೆಟ್ ನಲ್ಲಿ ಅನುದಾನ ಕೊಟ್ಟಿರುವುದರಿಂದ ಮುಂದಿನ ದಿನಗಳಲ್ಲಿ ಕಾಮಗಾರಿ ತ್ವರಿತಗೊಳ್ಳಬಹುದು. ಆದರೆ ಯೋಜನೆ ಪೂರ್ಣಗೊಳಿಸಲು ಈಗ ಕೊಟ್ಟಿರುವ ಹಣ ಸಾಲದಾಗಿದೆ.

Pragati TV Social Connect for more latest u

Leave a Reply

Your email address will not be published. Required fields are marked *