ಕುಣಿಗಲ್: ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಕಲ್ಲುಗಣಿಗಾರಿಕೆ ಮಾಡಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಕುಣಿಗಲ್ ಪೊಲೀಸರು ಕಲ್ಲು ಮತ್ತು ಲಾರಿಯನ್ನು ವಶ ಪಡಿಸಿಕೊಂಡು ತನಿಖೆ ಕೈಗೊಂಡಿರುವ ಘಟನೆ ತಾಲೂಕಿನ ಕಸಬಾ ಹೋಬಳಿ ಬೇಗೂರು ಗ್ರಾಮದ ಬಳಿ ಭಾನುವಾರ ನಡೆದಿದೆ.
ತಾಲೂಕಿನ ಬೇಗೂರು ಗ್ರಾಮದ ಸರ್ವೆ ನಂ 29 ರ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಹಲವು ದಿನಗಳಿಂದ ಗಣಿಗಾರಿಕೆ ನಡೆಯುತ್ತಿದೆ ಎಂದು ಕರೆ ಬಂದ ಮೇರೆಗೆ ಕಾರ್ಯ ಪ್ರವೃತ್ತರಾದ ಕುಣಿಗಲ್ ಪೊಲೀಸರು ಕಲ್ಲು ತುಂಬಿದ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಅಕ್ರಮ ಅಥವಾ ಸಕ್ರಮ ಎಂಬುದರ ಬಗ್ಗೆ ತನಿಖೆ ಕೈಗೊಂಡಿದ್ದು, ಈ ಸಂಬAಧ ತುಮಕೂರು ಗಣಿ ಮತ್ತು ಭೂವಿಜ್ಞಾನ ಇಲಾಖೆ ಮತ್ತು ಕುಣಿಗಲ್ ತಹಶೀಲ್ದಾರ್ ಅವರಿಗೆ ಮಾಹಿತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕ್ರಮಕ್ಕೆ ಆಗ್ರಹ:
ತಾಲೂಕಿನ ಸಂಕೇನಪುರ ಗ್ರಾಮದ ಆರ್ಟಿಐ ಕಾರ್ಯಕರ್ತ ಎಸ್.ಎಂ. ತಮ್ಮಣ್ಣಗೌಡ ಪತ್ರಿಕೆಯೊಂದಿಗೆ ಮಾತನಾಡಿ, ಬೇಗೂರು ಗ್ರಾಮದ ಸರ್ವೆ ನಂ ೨೯ ರಲ್ಲಿ ೫೧ ಎಕರೆ ೧೦ ಗುಂಟೆ ಜಮೀನಿದ್ದು, ಈ ಜಮೀನಿನಲ್ಲಿ ಸರ್ಕಾರಿ ಶಾಲೆ ಕಟ್ಟಡ ಗ್ರಾಮದ ಸಾರ್ವಜನಿಕ ರಸ್ತೆ ಇದೆ. ಇದಕ್ಕೆ ಹೊಂದಿಕೊAಡತೆ ಸುಮಾರು ೧೦೦ ಮೀಟರ್ ಅಂತರದಲ್ಲಿ ಕಲ್ಲು ಗಣಿಗಾರಿಕೆ ನಡೆಯುತ್ತಿದೆ.
ಅಕ್ರಮವಾಗಿ ಸಿಡ್ಡಿ ಮದ್ದು ಸ್ಪೋಟಕ, ಡೈನಾಮೈಟ್ಗಳಿಂದ ಸ್ಪೋಟಿಸಿ ಕಲ್ಲುಗಣಿಗಾರಿಕೆಯನ್ನು ಇದೇ ಗ್ರಾಮದ ದಾಸೇಗೌಡ ಎಂಬುವರು ನಡೆಸುತ್ತಿದ್ದಾರೆ. ಇವರು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಯಾವುದೇ ಅನುಮತಿ ಪಡೆಯದೆ ಕಲ್ಲುಗಣಿಗಾರಿಕೆ ನಡೆಸುತ್ತಿರುವುದು ಕಾನೂನು ಬಾಹಿರವಾಗಿದೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ಹೇಳಿದ್ದಾರೆ.
For More Updates Join our WhatsApp Group :