ಗಾಯಾಳುವಿನ ಮಾತುಗಳಲ್ಲಿ ಬಿಚ್ಚಿಟ್ಟ ದುರಂತ.
ತುಮಕೂರು : ಶಬರಿಮಲೆ ಅಯ್ಯಪ್ಪನ ದರ್ಶನ ಮಾಡಿ ಬರುತ್ತಿದ್ದ ಕೊಪ್ಪಳ ಜಿಲ್ಲೆ ಯಲಬುರ್ಗಾ ಮೂಲದ ನಾಲ್ವರು ನಿವಾಸಿಗಳು ತುಮಕೂರಿನ ಕೋರಾ ಸಮೀಪದ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ರಸ್ತೆ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟಿದ್ದಾರೆ. ಏಳು ಮಂದಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ನಿಂತಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿ ಹೊಡೆದ ಕಾರಣ ಅವಘಡ ಸಂಭವಿಸಿದ್ದು, ಸಾಕ್ಷಿ (7), ವೆಂಕಟೇಶಪ್ಪ (30), ಮಾರತಪ್ಪ (35) ಹಾಗೂ ಗವಿಸಿದ್ದಪ್ಪ (40) ಮೃತಪಟ್ಟಿದ್ದಾರೆ. ಸಾಕ್ಷಿ ತಂದೆ ಉಲಗಪ್ಪ ಅಪಘಾತದಲ್ಲಿ ಗಾಯಗೊಂಡಿದ್ದು, ಇದೀಗ ಮಗಳನ್ನು ಕಳೆದುಕೊಂಡು ಕಣ್ಣೀರಿಡುತ್ತಿದ್ದಾರೆ.
For More Updates Join our WhatsApp Group :




