ತುಮಕೂರು: ರಾಜ್ಯದಲ್ಲಿ ಬೆಂಗಳೂರು ನಂತರ ಅತಿವೇಗವಾಗಿ ಬೆಳೆಯುತ್ತಿರುವ ನಗರವೆಂದರೆ ತುಮಕೂರು, ಇಲ್ಲಿಯ ಜನರ ಕುಡಿಯುವ ನೀರಿನ ಸಮಸ್ಯೆ ಮತ್ತು ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವಿವಾದದ ಬಗ್ಗೆ ನಿನ್ನೆ ನೀರಾವರಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರೊಂದಿಗೆ ಸವಿಸ್ತಾರವಾಗಿ ಚರ್ಚಿಸಲಾಗಿದೆ ಎಂದು ಕೇಂದ್ರ ಸಚಿವ ವಿ ಸೋಮಣ್ಣ ಹೇಳಿದರು.

ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ, ಜಿ ಪರಮೇಶ್ವರ್ ಸೇರಿದಂತೆ ಈ ಭಾಗದ ಎಲ್ಲ ಶಾಸಕರು ಹಾಜರಿದ್ದ ಸಭೆಯಲ್ಲಿ ಶಿವಕುಮಾರ್ ತಮ್ಮ ಪ್ರಸ್ತಾಪಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಕೇಂದ್ರ ಸಚಿವ ಹೇಳಿದರು