ತುಮಕೂರು : ಸುಪ್ರಸಿದ್ಧ ಪುಣ್ಯಕ್ಷೇತ್ರ ಕಲ್ಪತರು ನಾಡಿನ ಶ್ರೀಮಹಾಲಕ್ಷ್ಮೀ ಎಂದೇ ಪ್ರಖ್ಯಾತಿ ಪಡೆದಿರುವ ಕೊರಟಗೆರೆ ತಾಲ್ಲೂಕಿನ ಗೊರವನಹಳ್ಳಿ ಶ್ರೀಮಹಾಲಕ್ಷ್ಮೀ ದೇವಾಲಯಕ್ಕೆ ಹೊಸ ವರ್ಷದ ಪ್ರಯುಕ್ತ ಸಾವಿರಾರು ಭಕ್ತರು ದೇವಾಲಯಕ್ಕೆ ಭೇಟಿ ನೀಡಿ ತಾಯಿಯ ದರ್ಶನ ಪಡೆದರು.
ಹೊಸ ವರ್ಷದ ಹಿನ್ನೆಲೆ ಶ್ರೀಮಹಾಲಕ್ಷ್ಮೀ ಟ್ರಸ್ಟ್ ವತಿಯಿಂದ ಮುಂಜಾನೆಯಿದಲೇ ಶ್ರೀಮಹಾಲಕ್ಷ್ಮೀ ಅಮ್ಮನವರಿಗೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ವಿಶೇಷ ಪೂಜೆಗಳು ನಡೆದಿದ್ದು, 35 ಸಾವಿರಕ್ಕೂ ಅಧಿಕ ಭಕ್ತರು ಆಗಮಿಸಿ ಅಮ್ಮನವರ ದರ್ಶನ ಪಡೆದಿದ್ದು, ಭಕ್ತರಿಗೆ ನೂತನ ದಾಸೋಹ ಭವನದಲ್ಲಿ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು