ತುಮಕೂರು || ಸ್ವಯಂ ಉದ್ಯೋಗ ಸ್ಥಾಪಿಸಲು ವಿವಿಧ ಕೌಶಲ್ಯಗಳಿಗೆ ತರಬೇತಿ

ತುಮಕೂರು : ಗ್ರಾಮೀಣ ಭಾಗದ ಜನರು ಸ್ವಾವಲಂಬಿ ಜೀವನ ಕಟ್ಟಿಕೊಳ್ಳಲು ಸ್ವಯಂ ಉದ್ಯೋಗ ಸ್ಥಾಪಿಸಲು ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ವಿವಿಧ ಕೌಶಲ್ಯಗಳಿಗೆ ನೀಡಲಾಗುವ ತರಬೇತಿಯನ್ನು  ಅರ್ಹ ಫಲಾನುಭವಿಗಳು ಸದುಪಯೋಗ ಪಡಿಸಿಕೊಳ್ಳುವಂತೆ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ  ಅರಿವು ಮೂಡಿಬೇಕೆಂದು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ(ಆಡಳಿತ) ಹಾಲ ಸಿದ್ದಪ್ಪ ಪೂಜೇರಿ ಸೂಚಿಸಿದರು.

ನಗರದ ಹೊರವಲಯದ ಹಿರೇಹಳ್ಳಿಯಲ್ಲಿರುವ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಆರ್‌ಎಸ್‌ಇಟಿಐ  ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಪ್ರಸಕ್ತ ವರ್ಷದ ಜನವರಿ ಮಾಹೆಯಿಂದ ಜೂನ್ ಮಾಹೆವರೆಗೆ ೪೪೮ ಅಭ್ಯರ್ಥಿಗಳಿಗೆ ವಿವಿಧ ಕೌಶಲ್ಯಗಳ ಬಗ್ಗೆ ತರಬೇತಿ ನೀಡುವುದರ ಜೊತೆಗೆ ವಿವಿಧ ಬ್ಯಾಂಕುಗಳಿAದ ಸಾಲ- ಸೌಲಭ್ಯವನ್ನು ನೀಡುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ತರಬೇತಿ ಸಂಸ್ಥೆ ವತಿಯಿಂದ ಟೈಲರಿಂಗ್, ಮೊಬೈಲ್ ಮತ್ತು ಸಿಸಿಟಿವಿ ರಿಪೇರಿ, ಕಂಪ್ಯೂಟರ್ ಕಲಿಕೆ, ಹಪ್ಪಳ ತಯಾರಿಕೆ, ಅಗರಬತ್ತಿ ತಯಾರಿಕೆ ಸೇರಿದಂತೆ ವಿವಿಧ ರೀತಿಯ ಕೌಶಲ್ಯಗಳಿಗೆ ತರಬೇತಿ ನೀಡಲಾಗುತ್ತಿದೆ, ತರಬೇತಿ ಪಡೆಯಲು ಬರುವ ಅಭ್ಯರ್ಥಿಗಳಿಗೆ ಸಂಸ್ಥೆಯಲ್ಲಿ ಗ್ರಂಥಾಲಯ ಹಾಗೂ ಉಚಿತ ವಸತಿ ಮತ್ತು ಊಟದ  ವ್ಯವಸ್ಥೆ ಕಲ್ಪಿಸಲಾಗಿದ್ದು ಗ್ರಾಮೀಣ ಭಾಗದ ಜನರು ಸಂಸ್ಥೆಯ ಯೋಜನೆಗಳ ಬಗ್ಗೆ ತಿಳಿದುಕೊಳ್ಳಲು ಅನುಕೂಲವಾಗುವಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪ್ರಚಾರ ಕಾರ್ಯ ಕೈಗೊಂಡು ಗ್ರಾಮೀಣ ಭಾಗದ ಯುವಜನರು ಮತ್ತು ಮಹಿಳೆಯರು ಸಂಸ್ಥೆಯ ಯೋಜನೆಗಳ  ಸದುಪಯೋಗ ಪಡೆದುಕೊಳ್ಳುವಂತೆ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.

Leave a Reply

Your email address will not be published. Required fields are marked *