ತುಮಕೂರು:- ಡ್ಯಾಂ ನಿರ್ಮಾಣದ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಕೊರಟಗೆರೆ ಕ್ಷೇತ್ರದಲ್ಲಿ 12 ಗ್ರಾಮಗಳು ಮುಳುಗಡೆಯಾಗುವ ಆತಂಕವಿದ್ದು, ಅಲ್ಲಿನ ಗ್ರಾಮಸ್ಥರಿಂದ ವಿರೋಧ ವ್ಯಕ್ತವಾಗಿದೆ.
ಹೌದು, ಎತ್ತಿನಹೊಳೆ ಬಪರ್ ಡ್ಯಾಂ ನಿರ್ಮಾಣಕ್ಕೆ ರೈತರ ವಿರೋಧ ವ್ಯಕ್ತವಾಗಿದೆ. ಕೊರಟಗೆರೆ ತಾಲ್ಲೂಕಿನ ಕೋಳಾಲ ಹೋಬಳಿಯ ರೈತರಿಂದ ವಿರೋಧ ಕೇಳಿಬಂದಿದೆ.
ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಹಲವು ಹಳ್ಳಿಗಳ ರೈತರು ಡ್ಯಾಂ ನಿರ್ಮಾಣಕ್ಕೆ ವಿರೋಧ ವ್ಯಕ್ತಪಿಸಿದ್ದಾರೆ.
ಬೈರಗೊಂಡ್ಲು ಸಮೀಪ ಬಪರ್ ಡ್ಯಾಂ ನಿರ್ಮಾಣಕ್ಕೆ ಸರ್ಕಾರ ಸ್ಥಳ ಗುರುತು ಮಾಡುತ್ತಿದ್ದ ವೇಳೆ ರೈತರು, ಗ್ರಾಮಸ್ಥರು ವಿರೋಧ ತೋರಿದ್ದಾರೆ. ಜಿಲ್ಲಾಧಿಕಾರಿ ಶುಭಕಲ್ಯಾಣ್ ಸೇರಿದಂತೆ ಇತರೆ ಅಧಿಕಾರಿಗಳು ಸ್ಥಳ ಪರಿಶೀಲನೆಗೆ ತೆರಳಿದ್ದ ವೇಳೆ ಡ್ಯಾಂ ನಿರ್ಮಾಣ ಬೇಡ ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಬಪರ್ ಡ್ಯಾಂ ನಿರ್ಮಾಣದಿಂದ ಕೋಳಾಲ ಹೋಬಳಿಯ 12 ಗ್ರಾಮಗಳ ರೈತರಿಗೆ ಸಂಕಷ್ಟ ಎದುರಾಗಲಿದೆ. ಜಮೀನು ಕಳೆದುಕೊಳ್ಳುವ ಭೀತಿಯಲ್ಲಿ ರೈತರು ಇದ್ದಾರೆ. ಡ್ಯಾಂ ನಿರ್ಮಣದಿಂದ ರೈತರ ಜಮೀನು ಜಲಾವೃತವಾಗುತ್ತವೆ ಎಂದು
ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ್‌ಗೆ ಸ್ಥಳೀಯ ರೈತರು ಮನವಿ ಸಲ್ಲಿಸಿದ್ದಾರೆ.
ಹಿಂದೆ ಭೈರಗೊಂಡ್ಲು ಬಿಟ್ಟು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಡ್ಯಾಂ ನಿರ್ಮಾಣಕ್ಕೆ ನಿರ್ಧರಿಸಲಾಗಿತ್ತು.
ಇದೀಗ ಮತ್ತೆ ಭೈರಗೊಂಡ್ಲುವಿನಲ್ಲಿ ಡ್ಯಾಂ ನಿರ್ಮಾಣಕ್ಕೆ ಮುಂದಾದ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಡ್ಯಾಂ ನಿರ್ಮಾಣಕ್ಕೆ ರೈತರ ಭಾರೀ ವಿರೋಧ ವ್ಯಕ್ತವಾಗಿದೆ.