ತುಮಕೂರು || ಜನ ಔಷಧಿ ಮುಚ್ಚುವ ಕ್ರಮ ವಾಪಸ್ಸಿಗೆ ವಿ. ಸೋಮಣ್ಣ ಒತ್ತಾಯ, CM ಗೆ ಪತ್ರ

ತುಮಕೂರು || ಜನ ಔಷಧಿ ಮುಚ್ಚುವ ಕ್ರಮ ವಾಪಸ್ಸಿಗೆ ವಿ. ಸೋಮಣ್ಣ ಒತ್ತಾಯ, CM ಗೆ ಪತ್ರ

ತುಮಕೂರು:- ಪ್ರಧಾನ ಮಂತ್ರಿ ಜನ ಔಷಧಿ ಕೇಂದ್ರ ಗಳನ್ನು ಮುಚ್ಚುವ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ  ಕೇಂದ್ರ ರೈಲ್ವೆ ಮತ್ತು ಜಲ ಶಕ್ತಿ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಪ್ರಧಾನ ಮಂತ್ರಿ ಜನ ಔಷಧಿ ಯೋಜನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ರಾಷ್ಟ್ರದ ಬಡ ಕೆಳವರ್ಗ ಹಾಗೂ ಮಧ್ಯಮ ವರ್ಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅತ್ಯಂತ ಕಾಳಜಿ ಹಾಗೂ ದೂರದೃಷ್ಟಿಯಿಂದ  ಜಾರಿಗೊಳಿಸಿದ್ದಾರೆ. ಆದರೆ ಕರ್ನಾಟಕ ಸರ್ಕಾರವು ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ಮುಚ್ಚುವ ತೀರ್ಮಾನವನ್ನು ತೆಗೆದುಕೊಂಡಿದ್ದು ಹಾಗೂ ಈಗಾಗಲೇ ಚಾಲನೆಯಲ್ಲಿರುವ ಕೇಂದ್ರದ ಪರವಾನಿಗೆಯನ್ನು ನವೀಕರಿಸದೆ ಇರುವುದು ಅತ್ಯಂತ ಬೇಸರದ ಸಂಗತಿ ಆಗಿದೆ. ಜನೌಷದ ಕೇಂದ್ರ ಮುಚ್ಚುವ ನಿರ್ಧಾರವನ್ನು ಕೈಬಿಡುವಂತೆ ಆಗ್ರಹಿಸಿದ್ದಾರೆ.

ಜನ ಔಷಧಿ ಕೇಂದ್ರಗಳಲ್ಲಿ ಉತ್ತಮ ಗುಣಮಟ್ಟದ ಔಷಧಿ ಹಾಗೂ ಸರ್ಜಿಕಲ್ ಐಟಂಗಳು ರೋಗಿಗಳಿಗೆ ಅತ್ಯಂತ ಕಡಿಮೆ ದರದಲ್ಲಿ ಸಿಗುತ್ತವೆ. ಇದು ರೋಗಿಗಳಿಗೆ ಅನುಕೂಲ ಮಾಡಿಕೊಟ್ಟಿತ್ತು. ಆದರೆ, ಮುಚ್ಚುವ ಕ್ರಮ ಖಂಡನೀಯ ಎಂದಿದ್ದಾರೆ.

ದೀರ್ಘಕಾಲದ ರಾಜಕೀಯ ಅನುಭವ ಹೊಂದಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ರಾಜ್ಯದ ಬಡವರು ಹಾಗೂ ಕೆಳವರ್ಗದವರ ಹಿತವನ್ನು ಕಾಯದೇ, ಯಾವ ಕಾರಣದಿಂದ ಕರ್ನಾಟಕ ರಾಜ್ಯದ ಬಡವರ ವಿರುದ್ಧ ಕೆಲಸ ಮಾಡುತ್ತಿದ್ದಾರೆ ಎಂಬುದು ಜನೌಷಧ ಕೇಂದ್ರಗಳನ್ನು ಮುಚ್ಚುವ ನಿರ್ಧಾರದಿಂದ ತಿಳಿಯುತ್ತದೆ.

ಈ ಕೂಡಲೇ ಅವರು ತಮ್ಮ ನಿರ್ಧಾರವನ್ನು ಮರುಪರಿಶೀಲಿಸಿ ಪ್ರಧಾನಮಂತ್ರಿ ಜನ ಔಷಧಿ ಕೇಂದ್ರಗಳನ್ನು ಮುಚ್ಚುವ ಆದೇಶವನ್ನು ಹಿಂಪಡೆದು ಈಗಾಗಲೇ ಚಾಲ್ತಿಯಲ್ಲಿರುವ ಕೇಂದ್ರಗಳ ಪರವಾನಿಗೆಯನ್ನು ಮುಂದುವರಿಸಲು ಆದೇಶವನ್ನು ಮಾಡಬೇಕು ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *