ತುಮಕೂರು: ನಗರದ ರೈಲ್ವೆ ನಿಲ್ದಾಣದ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳ್ಳತನವಾಗಿದ್ದು, ಬೈಕ್ ಸವಾರ ತಡವಾಗಿ ಬಂದು ಹೊಸಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಘಟನೆ ಏನು?: ಸಪ್ತಗಿರಿ ಬಡಾವಣೆ ನಿವಾಸಿ ಲತೀಶ್ ಅವರು ಎಂದಿನAತೆ ಬೆಂಗಳೂರಿಗೆ ಕೆಲಸಕ್ಕೆ ತೆರಳಲು ಆಗಮಿಸಿದ್ದು, ಜು.2 ರಂದು ಬೆಳಗ್ಗೆ 11 ರ ಸಮಯದಲ್ಲಿ ರೈಲ್ವೆ ನಿಲ್ದಾಣದ ಮುಂಭಾಗ ರಸ್ತೆ ಬದಿಯಲ್ಲಿ ತಮ್ಮ ದ್ವಿಚಕ್ರ ವಾಹನವನ್ನು ನಿಲ್ಲಿಸಿ ಕೆಲಸಕ್ಕೆ ತೆರಳಿದ್ದಾರೆ. ಕೆಲಸ ಮುಗಿಸಿ ಸಂಜೆ ೭ರ ಸಮಯದಲ್ಲಿ ಬಂದು ನೋಡಿದಾಗ ವಾಹನ ನಿಲ್ಲಿಸಿದ ಜಾಗದಲ್ಲಿ ಇರಲಿಲ್ಲ. ನಂತರ ಎಲ್ಲೆಡೆ ಹುಡುಕಾಡಿದ್ದು, ವಾಹನ ಸಿಗದ ಕಾರಣ ದೂರು ದಾಖಲಿಸಿದ್ದಾರೆ.
ರೈಲ್ವೆ ನಿಲ್ದಾಣದ ಬಳಿ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಇಲ್ಲದ ಕಾರಣ ಹಲವರು ತಮ್ಮ ದ್ವಿಚಕ್ರ ವಾಹನಗಳನ್ನು ರಸ್ತೆ ಬದಿಯೇ ನಿಲ್ಲಿಸಿ ಕೆಲಸಕ್ಕೆ ಹೋಗುತ್ತಿದ್ದಾರೆ. ಇದರಿಂದ ಟ್ರಾಫಿಕ್ ಸಮಸ್ಯೆ ಮಾತ್ರವಲ್ಲದೆ ವಾಹನಗಳಗೂ ಸುರಕ್ಷತೆ ಇಲ್ಲದಂತಾಗಿದೆ.