ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರ ದುರ್ಮರ : ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಇದು ಸಾಮಾನ್ಯ..!

ತುಮಕೂರು : ಭೀಕರ ರಸ್ತೆ ಅಪಘಾತ ನಡೆದಿದ್ದು ಸ್ಥಳದಲ್ಲಿ ಇಬ್ಬರು ದುರ್ಮರಕ್ಕೀಡಾಗಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ತಿಪಟೂರು ತಾಲೂಕಿನ ಕೊನೆಹಳ್ಳಿಯಲ್ಲಿ ಗೂಡ್ಸ್ ವಾಹನ, ಅಶೋಕ ಲೈಲ್ಯಾಂಡ್ ಹಾಗೂ ದ್ವಿಚಕ್ರವಾಹನದ ನಡುವೆ ಅಪಘಾತ ನಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸಿದ್ದಾಪುರದ ನಿವಾಸಿ ಶಮಂತಾಚಾರ್ (55), ಶಿವಪುರದ ನಿವಾಸಿ ಶಿವಣ್ಣ (50) ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ  ದಾಖಲಾಗಿದೆ.

ರಾಷ್ಟ್ರೀಯ ಹೆದ್ದಾರಿ 206 ಯಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಸಂಚರಿಸುತ್ತಿದೆ. ರಸ್ತೆ ಅಭಿವೃದ್ಧಿಯ ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿದೆ. ಕಾಮಗಾರಿ ವೇಳೆ ರಸ್ತೆಗಳಲ್ಲಿ ಯಾವುದೇ ಸೂಚನಾ ಫಲಕಗಳಿಲ್ಲದ ಕಾರಣ ಅಪಘಾತಗಳು ನಡೆಯುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಳೆದ ಎರಡು ತಿಂಗಳಲ್ಲಿ ತಿಪಟೂರು ನಿಂದ ಅರಸೀಕೆರೆ ಮಧ್ಯೆ ಸುಮಾರು 10ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿವೆ.

Pragati TV Social Connect for more latest u

Leave a Reply

Your email address will not be published. Required fields are marked *