ಲೀಟರ್ ಹಾಲಿಗೆ ₹1 ಪ್ರೋತ್ಸಾಹ ಧನ ಘೋಷಿಸಿದ ಬಮೂಲ್.
ಬೆಂಗಳೂರು: ಬೆಂಗಳೂರು ಸಹಕಾರ ಹಾಲು ಒಕ್ಕೂಟ ಲೀಟರ್ ಹಾಲಿಗೆ 1 ರೂ. ಪ್ರೋತ್ಸಾಹ ಧನ ಘೋಷಿಸಿದೆ. ಆ ಮೂಲಕ ಹಾಲು ಉತ್ಪಾದಕರಿಗೆ ಯುಗಾದಿ ಉಡುಗೊರೆ ನೀಡಿದೆ. ಸರ್ಕಾರದಿಂದಲೂ 5 ರೂ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಬಮೂಲ್ನಿಂದ ಯಾವುದೇ ತಾರತಮ್ಯ ಇಲ್ಲದೆ ಎಲ್ಲರಿಗೂ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಏಪ್ರಿಲ್ 1ರಿಂದ ಮಾರ್ಚ್ 31ವರೆಗೆ ಹಾಲು ಹಾಕಿರುವವರಿಗೆ ಇದು ಲಭ್ಯವಾಗಲಿದೆ.
ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಹೇಳಿದ್ದಿಷ್ಟು
ಇನ್ನು ಈ ಬಗ್ಗೆ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಪ್ರತಿಕ್ರಿಯಿಸಿದ್ದು, ಯಾವುದೇ ತಾರತಮ್ಯ ಇಲ್ಲದೆ ಬಮೂಲ್ನಿಂದ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ರಾಜ್ಯ ಸರ್ಕಾರವೂ 5 ರೂಪಾಯಿ ಪ್ರೋತ್ಸಾಹ ಧನ ಕೊಡುತ್ತಿದೆ. ರೈತರಿಂದ 59,39,78,492 ಲೀಟರ್ ಹಾಲು ಖರೀದಿಸಿದ್ದೇವೆ. ಈ ಬಾರಿ 500 ಕೋಟಿ ಹೆಚ್ಚುವರಿ ಟರ್ನ್ ಓವರ್ ಮಾಡುವ ಗುರಿ ಇದೆ ಎಂದು ಹೇಳಿದ್ದಾರೆ.
ಸರ್ಕಾರಕ್ಕೆ ಮನವಿ
ಇನ್ನು ಕ್ಷೀರ ಭಾಗ್ಯಕ್ಕೆ 75 ಸಾವಿರ ಲೀಟರ್ ಪೌಡರ್ ಆಗಿ ಕನ್ವರ್ಟ್ ಮಾಡಿ ಕೊಡುತ್ತಿದ್ದೇವೆ. ರಾಗಿ ಮಾಲ್ಟ್ ಜೊತೆ ಹಾಲು ಮಿಕ್ಸ್ ಮಾಡಿ ಕೂಡ ನಾವೂ ಕೊಡಲು ಸಿದ್ಧ. ಈ ಕುರಿತು ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಮಾಹಿತಿ ನೀಡಿದ್ದಾರೆ.
For More Updates Join our WhatsApp Group :




