UGC-NET ಪರೀಕ್ಷೆ ರದ್ದತಿ : ಕೇಂದ್ರದ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ

ನವದೆಹಲಿ:  UGC-NET ಪರೀಕ್ಷೆ ರದ್ದಾದ ನಂತರ ಕಾಂಗ್ರೆಸ್ ಮೋದಿ ಸರ್ಕಾರವನ್ನು “ಪೇಪರ್ ಲೀಕ್ ಸರ್ಕಾರ” ಎಂದು ಕರೆದಿದೆ ಮತ್ತು ಶಿಕ್ಷಣ ಸಚಿವರು ಈಗ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತಾರೆಯೇ ಎಂದು ಕೇಳಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ವೈದ್ಯಕೀಯ ಪ್ರವೇಶ ಪರೀಕ್ಷೆ NEET ನಲ್ಲಿನ ಅಕ್ರಮಗಳ ಬಗ್ಗೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು “ನೀಟ್ ಪರೀಕ್ಷೆಯನ್ನು ಯಾವಾಗ ನಡೆಸುತ್ತಾರೆ” ಎಂದು ಕೇಳಿದ್ದಾರೆ.

ಶಿಕ್ಷಣ ಸಚಿವಾಲಯ ಯುಜಿಸಿ-ನೆಟ್ ಪರೀಕ್ಷೆ ರದ್ದುಗೊಳಿಸಿ ಆದೇಶಿಸಿದ ನಂತರ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ ಹೊಣೆಗಾರಿಕೆ ಪ್ರಶ್ನಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಖರ್ಗೆ, ನರೇಂದ್ರ ಮೋದಿ ಅವರೇ, ನೀವು ಪರೀಕ್ಷೆಗಳ ಬಗ್ಗೆ ಸಾಕಷ್ಟು ಚರ್ಚಿಸುತ್ತೀರಿ, ಆದರೆ ನೀವು ಯಾವಾಗ ‘ನೀಟ್ ಪರೀಕ್ಷಾ ಪೇ ಚರ್ಚಾ’ ನಡೆಸುತ್ತೀರಿ. ಯುಜಿಸಿ-ನೆಟ್ ಪರೀಕ್ಷೆಯನ್ನು ರದ್ದುಗೊಳಿಸುವುದು ಲಕ್ಷಾಂತರ ವಿದ್ಯಾರ್ಥಿಗಳ ಗೆಲುವಾಗಿದೆ ಎಂದಿದ್ದಾರೆ.

“ಇದು ಮೋದಿ ಸರ್ಕಾರದ ದುರಹಂಕಾರದ ಸೋಲು, ಇದರಿಂದಾಗಿ ಅವರು ನಮ್ಮ ಯುವ ಜನತೆಯ ಭವಿಷ್ಯವನ್ನು ತುಳಿಯುವ ಹೇಯ ಪ್ರಯತ್ನವನ್ನು ಮಾಡಿದ್ದಾರೆ. NEET ಪರೀಕ್ಷೆಯಲ್ಲಿ ಯಾವುದೇ ಪೇಪರ್ ಸೋರಿಕೆಯಾಗಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವರು ಮೊದಲು ಹೇಳುತ್ತಾರೆ. ಆದರೆ ಬಿಹಾರ, ಗುಜರಾತ್ ಮತ್ತು ಹರಿಯಾಣದಲ್ಲಿ ಶಿಕ್ಷಣ ಮಾಫಿಯಾದವರನ್ನು ಬಂಧಿಸಿದಾಗ “ಏನೋ ಹಗರಣ” ನಡೆದಿದೆ ಎಂದು ಸಚಿವರು ಒಪ್ಪಿಕೊಳ್ಳುತ್ತಾರೆ. NEET ಪರೀಕ್ಷೆಯನ್ನು ಯಾವಾಗ ರದ್ದುಗೊಳಿಸಲಾಗುತ್ತದೆ ಎಂದು ಕೇಳಿದ್ದು, ನೀಟ್ ಪರೀಕ್ಷೆಯಲ್ಲೂ ಪೇಪರ್ ಸೋರಿಕೆ ಮತ್ತು ಸರ್ಕಾರದ ಗೊಂದಲ ತಡೆಯುವ ಜವಾಬ್ದಾರಿಯನ್ನು ಮೋದಿ ಅವರು ತೆಗೆದುಕೊಳ್ಳಲಿ ಎಂದಿದ್ದಾರೆ.

ಮತ್ತೊಂದೆದೆ ಮೋದಿ ಸರ್ಕಾರ ಯುವಜನರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಜೂನ್ 18ರಂದು UGC-NET ಪರೀಕ್ಷೆಯನ್ನು ದೇಶದ ವಿವಿಧ ನಗರಗಳಲ್ಲಿ ನಡೆಸಲಾಗಿತ್ತು. ಪೇಪರ್ ಸೋರಿಕೆಯ ಶಂಕೆಯಿಂದ ಪರೀಕ್ಷೆಯನ್ನು ರದ್ದುಗೊಳಿಸಲಾ

Leave a Reply

Your email address will not be published. Required fields are marked *