ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೀವತಾವಧಿ ಶಿಕ್ಷೆಗೆ ಗುರಿಯಾಗಿದ್ದಾರೆ. ಆದ್ರೆ, ಇದೀಗ ಈ ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟು ಜಾಮೀನು ನೀಡುವಂತೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಇಂದು (ಡಿಸೆಂಬರ್ 01) ನ್ಯಾಯಮೂರ್ತಿಗಳಾದ ಕೆ.ಎಸ್ ಮುದಗಲ್ ಮತ್ತು ಟಿ ವೆಂಕಟೇಶ್ ನಾಯಕ್ ವಿಭಾಗೀಯ ಪೀಠ ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ಪ್ರಜ್ವಲ್ ರೇವಣ್ಣ ಪರ ಹಿರಿಯ ವಕೀಲ ಸಿದ್ಧಾರ್ಥ್ ಲೂಥ್ರಾ ಪ್ರಬಲ ವಾದ ಮಂಡಿಸಿದ್ದು, ಸಂತ್ರಸ್ತೆಯ ಮೌನ, ಸಾಕ್ಷ್ಯಗಳ ಮೇಲಿನ ಸಂಶಯಗಳನ್ನು ಮುಂದಿಟ್ಟು ಶಿಕ್ಷೆ ಅಮಾನತುಗೊಳಿಸಿ ಜಾಮೀನು ನೀಡುವಂತೆ ಮನವಿ ಮಾಡಿದರು.
ಪ್ರಜ್ವಲ್ ಪರ ವಕೀಲರ ವಾದ ಹೇಗಿತ್ತು?
ಪ್ರಜ್ವಲ್ ರೇವಣ್ಣ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ್ ಲೂಥ್ರಾ ಪ್ರಬಲ ವಾದ ಮಂಡಿಸಿದ್ದು, ಪ್ರಜ್ವಲ್ 2024 ಏಪ್ರಿಲ್ 24ರಂದು ದೇಶ ತೊರೆಯುವಾಗ ಅವರ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ. ಆ್ಯಪಲ್ ಮೊಬೈಲ್ ವಶಕ್ಕೆ ನೀಡಿಲ್ಲವೆಂದು ಪ್ರಾಸಿಕ್ಯೂಷನ್ ಆರೋಪಿಸಿದೆ. ಆ್ಯಪಲ್ ಮೊಬೈಲ್ ನೀಡುವಂತೆ ಸೆ.91ರ ಅಡಿ ನೋಟಿಸ್ ನೀಡಿಲ್ಲ. ಐಎಂಇಐ ನಂಬರ್ ಆಧರಿಸಿ ಮೊಬೈಲ್ ಕಂಪನಿಯಿಂದ ಮಾಹಿತಿ ಪಡೆಯಲು ಯತ್ನಿಸಿಲ್ಲ. ಸಂತ್ರಸ್ತೆ ದೂರು ದಾಖಲಿಸದೇ 3 ವರ್ಷ ಮೌನವಾಗಿ ಇದ್ದಿದ್ದೇಕೆ? ಒಮ್ಮೆಗೇ ನಾಲ್ಕು ಪ್ರತ್ಯೇಕ ಕ್ರಿಮಿನಲ್ ಕೇಸ್ಗಳು ಹೇಗೆ ದಾಖಲಾದವು? ಎಂದು ಪ್ರಶ್ನಿಸಿದರು.
For More Updates Join our WhatsApp Group :
