ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ H.D. Kumaraswamy ಗಂಭೀರ ಆರೋಪ

ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ H.D. Kumaraswamy ಗಂಭೀರ ಆರೋಪ

ಬೆಂಗಳೂರು: ವಸತಿ ಇಲಾಖೆಯಲ್ಲಿ ಕೇಳಿ ಬರುತ್ತಿರುವ ಆಕ್ರಮಗಳಿಂದ ಜನರ ಗಮನ ಬೇರೆಡೆಗೆ ಸೆಳೆಯಲು ಸಚಿವ ಹೆಚ್.ಕೆ. ಪಾಟೀಲ್ ಬರೆದಿರುವ ಪತ್ರವನ್ನು ತೇಲಿ ಬಿಡಲಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು.

ಮಂಡ್ಯದಲ್ಲಿ ಸುಸಜ್ಜಿತ ಆಟೋ ನಿಲ್ದಾಣ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ವಸತಿ ಇಲಾಖೆಯಲ್ಲಿ ಏನೆಲ್ಲಾ ಅಕ್ರಮಗಳು ನಡೆದಿವೆ ಎಂಬುದನ್ನು ಜನರು ಹಾದಿಬೀದಿಗಳಲ್ಲಿ ಮಾತನಾಡುತ್ತಿದ್ದಾರೆ. ಹಣ ಕೊಟ್ಟವರಿಗೆ ಮನೆ ಹಂಚಿಕೆ ಮಾಡಲಾಗಿದೆ ಎಂದು ಸ್ವತಃ ಕಾಂಗ್ರೆಸ್ ಪಕ್ಷದ ಶಾಸಕರು, ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ್ ಆಡಿಯೋದಲ್ಲಿ ಏನಿದೆ ಎಂಬುದನ್ನು ಎಲ್ಲರೂ ಕೇಳಿದ್ದಾರೆ. ವಸತಿ ಇಲಾಖೆಯ ಬಗ್ಗೆ ಕೇಳಿಬಂದಿರುವ ಈ ಆರೋಪದ ಬಗ್ಗೆ ನನಗೇನು ಅಚ್ಚರಿ ಆಗಿಲ್ಲ. ಪಾಟೀಲ್ ಅವರ ಆರೋಪಗಳ ಬಗ್ಗೆಯೂ ನನಗೆ ಅಚ್ಚರಿ ಆಗಿಲ್ಲ. ಇದು ಎಲ್ಲರಿಗೂ ಗೊತ್ತಿರುವ ವಿಚಾರವೇ ಆಗಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿಯವರು ಹೇಳಿದರು.

Leave a Reply

Your email address will not be published. Required fields are marked *