ಉತ್ತರಾಖಂಡ): ನಿನ್ನೆ ಮಧ್ಯಾಹ್ನ ಮೇಘಸ್ಫೋಟ ಸಂಭವಿಸಿದ ಬಳಿಕ ಉದ್ಭವಿಸಿದ ಭಾರಿ ಪ್ರವಾಹದಿಂದಾಗಿ ಇಲ್ಲಿನ ಧರಾಲಿ ಗ್ರಾಮದ ಅರ್ಧದಷ್ಟು ಪ್ರದೇಶವೇ ನಾಶವಾಗಿ ಹೋಗಿದೆ. ಈಗಾಗಲೇ ನಾಲ್ವರು ಸಾವನ್ನಪ್ಪಿದ್ದು, ಇನ್ನೂ ಕನಿಷ್ಠ 60 ಮಂದಿ ಕಾಣೆಯಾಗಿರುವ ಕುರಿತು ಮಾಹಿತಿ ದೊರೆತಿದೆ. ಇಂದು ಭಾರತೀಯ ಸೇನೆ ಸೇರಿದಂತೆ ಇತರೆ ರಕ್ಷಣಾ ತಂಡಗಳು ಶೋಧ ಕಾರ್ಯಾಚರಣೆ ಪುನರಾರಂಭಿಸಿದ್ದು, ಅವಶೇಷಗಳ ನಡುವೆ ಸಿಲುಕಿಕೊಂಡವರಿಗೆ ಹುಡುಕಾಟ ನಡೆಸುತ್ತಿದ್ದಾರೆ.
130 ಮಂದಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ: ಗಂಗಾ ನದಿ ಹುಟ್ಟುವ ಸ್ಥಳದಿಂದ ಗಂಗೋತ್ರಿಗೆ ತೆರಳುವ ಹಾದಿಯಲ್ಲಿ ಈ ಗ್ರಾಮ ಸಿಗುತ್ತದೆ. ಮೇಘಸ್ಫೋಟದ ನಂತರದ ಭಯಾನಕ ಪ್ರವಾಹದಲ್ಲಿ ಇದುವರೆಗೆ ನಾಲ್ವರು ಸಾವನ್ನಪ್ಪಿದ್ದು, ಸುಮಾರು 130 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗೆ ಭಾರತೀಯ ಸೇನೆ ಎಂಐ-17 ಮತ್ತು ಚಿನೂಕ್ ಹೆಲಿಕಾಪ್ಟರ್‌ಗಳನ್ನು ಬಳಸಿದೆ.
ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರು ಮೇಘಸ್ಫೋಟ ಸಂಭವಿಸಿದ ಧರಾಲಿ ಗ್ರಾಮಕ್ಕೆ ಇಂದು ಭೇಟಿ ನೀಡಿದ್ದಾರೆ.
ಪ್ರವಾಹದಲ್ಲಿ ಕನಿಷ್ಠ 60 ಮಂದಿ ಕಾಣೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗುತ್ತಿದೆ. ಪ್ರಕೃತಿ ವಿಕೋಪ ಘಟಿಸಿದಾಗ ಧರಾಲಿ ಗ್ರಾಮದಲ್ಲಿ ಹರ್ ದೂದ್ ಜಾತ್ರೆ ನಡೆಯುತ್ತಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಅಲ್ಲಿ ಜನ ಸೇರಿದ್ದರು. ಹಾಗಾಗಿ, ಮೃತರ ಸಂಖ್ಯೆ ಹೆಚ್ಚಾಗಬಹುದು ಎಂದು ಹೇಳಲಾಗುತ್ತಿದೆ.
For More Updates Join our WhatsApp Group :