ವಾಲ್ಮೀಕಿ ನಿಗಮ ಹಗರಣ – Chargesheetನಲ್ಲಿ ಬಿ. ನಾಗೇಂದ್ರ, ದದ್ದಲ್ ಹೆಸರು ಮಾಯ

ಶಿವಮೊಗ್ಗ:ಕರ್ನಾಟಕ ವಾಲ್ಮೀಕಿ ಮಹರ್ಷಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಿಸಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದರ ತನಿಖೆಯನ್ನು ಸಿಐಡಿ ವಹಿಸಿಕೊಂಡಿತ್ತು. ಈ ಸಂಬಂಧ ಸಿಐಡಿ ಅಧಿಕಾರಿಗಳು ತನಿಖೆ ಮುಗಿಸಿ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿದೆ.

ವಿಶೇಷವೇನೆಂದರೆ ಚಾರ್ಜ್ ಶೀಟ್ನಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷ, ಕಾಂಗ್ರೆಸ್ ಶಾಸಕ ಬಸನಗೌಡ ದದ್ದಲ್ ಅವರ ಹೆಸರನ್ನು ಉಲ್ಲೇಖಿಸದೇ, ಅಧಿಕಾರಿಗಳಾದ ಪದ್ಮನಾಭ ಹಾಗೂ ಪರುಶುರಾಮ್ ಅವರನ್ನುಆರೋಪಿಗಳನ್ನಾಗಿ ಮಾಡಿ ಚಾರ್ಜ್ಶೀಟ್ ಸಲ್ಲಿಸಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಮೇ 26ರಂದು ವಿನೋಬನಗರ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಘಟನೆ ಬಳಿಕ ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡಿದ್ದರು.

ಈ ಘಟನೆ ಸಂಬಂಧ ವಿನೋಭಾನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಚಂದ್ರಶೇಖರ್ ಪತ್ನಿ ನೀಡಿದ್ದ ದೂರು ಆಧರಿಸಿ ಸಿಐಡಿ ತನಿಖೆ ನಡೆಸಿತ್ತು. ಡೆತ್ನೋಟ್ ಆಧರಿಸಿ ತನಿಖೆ ಮಾಡಿರುವ ಸಿಐಡಿ ಅಧಿಕಾರಿಗಳ ಟೀಂ ಇದೀಗ ಕೇವಲ ಪದ್ಮನಾಭ, ಪರುಶುರಾಮ್ ಆರೋಪಿಗಳಾಗಿ ಮಾಡಿ ಚಾರ್ಜ್ಶೀಟ್ ಸಲ್ಲಿಸಿದೆ.

Leave a Reply

Your email address will not be published. Required fields are marked *