ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ (Valmiki Corporation scam) ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಇಂದು ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದೆ.
ಎಸ್‌ಐಟಿ ತಂಡದಿಂದ ಕೋರ್ಟ್‌ಗೆ ಸುಮಾರು 3 ಸಾವಿರ ಪುಟಗಳ ಪ್ರಾಥಮಿಕ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದ್ದು, 12 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಅನ್ನು ನಗರದ ಎಸಿಎಂಎಂ ಕೋರ್ಟ್ ಸಲ್ಲಿಸಲಾಗಿದೆ.
ಆರೋಪಿಗಳಾದ ಸತ್ಯನಾರಾಯಣ ವರ್ಮ, ಸತ್ಯನಾರಾಯಣ ಇಟ್ಕಾರಿ, ವಾಲ್ಮೀಕಿ ನಿಗಮ ಎಂಡಿ ಪದ್ಮನಾಭ. ಲೆಕ್ಕಾಧಿಕಾರಿ ಪರಶುರಾಮ, ನೆಕ್ಕುಂಟಿ ನಾಗರಾಜ್, ನಾಗೇಶ್ವರ್, ತೇಜ, ಸಾಯಿ ತೇಜ ಸೇರಿ 12 ಜನರ ಮೇಲೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಪ್ರಕರಣದಲ್ಲಿ ಸುಮಾರು 50 ಕೋಟಿ ಮೌಲ್ಯದ ನಗದು ಹಾಗೂ ಚಿನ್ನಾಭರಣವನ್ನು ಸೀಜ್ ಮಾಡಿ ನ್ಯಾಯಾಲಯದ ಸುಪರ್ದಿಗೆ ನೀಡಲಾಗಿದೆ. ಪ್ರಕರಣದಲ್ಲಿ ಮೊದಲಿಗೆ ಬಂಧನವಾದ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.