ವಾಟಾಳ್ ನಾಗರಾಜ್ ವಿನೂತನ ಪ್ರತಿಭಟನೆ..!

ವಾಟಾಳ್ ನಾಗರಾಜ್ ವಿನೂತನ ಪ್ರತಿಭಟನೆ..!

ತೆಂಗಿನಕಾಯಿ ಹೊಡೆದು ಭ್ರಷ್ಟಾಚಾರ ವಿರುದ್ಧ ಆಕ್ರೋಶ.!

 ಬೆಂಗಳೂರು:  ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಹಿರಿಯ ಹೋರಾಟಗಾರ ವಾಟಾಳ್ ನಾಗರಾಜ್ ಅವರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ತೆಂಗಿನಕಾಯಿ ಹೊಡೆಯುವ ಮೂಲಕ ಪ್ರತೀಕಾತ್ಮಕವಾಗಿ ಭ್ರಷ್ಟಾಚಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಬೆಂಗಳೂರಿನಿಂದ ಮೈಸೂರುವರೆಗೆ ಇದೇ ರೀತಿಯ ಇಡುಗಾಯಿ ಹೊಡೆಯುವ ಮೂಲಕ ಭ್ರಷ್ಟಾಚಾರ ವಿರೋಧಿ ದಿನ ಆಚರಿಸುವುದಾಗಿ ತಿಳಿಸಿದರು.

ದೇಶದಲ್ಲಿ ಭ್ರಷ್ಟಾಚಾರ ನಿರಂತರವಾಗಿ ಹೆಚ್ಚುತ್ತಿದ್ದು, ಸ್ವಾತಂತ್ರ್ಯ ಪಡೆದಷ್ಟು ವರ್ಷಗಳಾದರೂ ಅದನ್ನು ನಿಯಂತ್ರಿಸಲು ಸಾಧ್ಯವಾಗದಿರುವುದು ವಿಷಾದಕರ ಎಂದು ಹೇಳಿದರು. ಮಹಾತ್ಮ ಗಾಂಧಿ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಆದರ್ಶಗಳನ್ನು ನೆನಪಿಸಿಕೊಂಡು ಸ್ವಾತಂತ್ರ್ಯದ ಮೌಲ್ಯಗಳನ್ನು ಉಳಿಸಬೇಕೆಂದು ಕರೆ ನೀಡಿದರು. ಚುನಾವಣೆಗಳಿಂದ ಹಿಡಿದು ಆಡಳಿತ ವ್ಯವಸ್ಥೆಯವರೆಗೆ ಭ್ರಷ್ಟಾಚಾರದ ಪ್ರಭಾವ ಮುಂದುವರಿದಿದೆ ಎಂದು ಅವರು ವಾಗ್ದಾಳಿ ನಡೆಸಿದರು. ಭ್ರಷ್ಟಾಚಾರ ನಿರ್ಮೂಲನೆಯೇ ನಿಜವಾದ ಸ್ವಾತಂತ್ರ್ಯದ ಅರ್ಥ ಎಂದು ಅಭಿಪ್ರಾಯಪಟ್ಟರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *