ಹಿರಿಯ ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ಹೃದಯಾಘಾತದಿಂದ ನಿಧನ.

ಹಿರಿಯ ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ಹೃದಯಾಘಾತದಿಂದ ನಿಧನ.

ಹುಬ್ಬಳ್ಳಿ : ಕನ್ನಡ ರಂಗಭೂಮಿ ಹಾಗೂ ಚಲನಚಿತ್ರ ಲೋಕಕ್ಕೆ ಅಘಾತ ತರಿಸಿದ ಸುದ್ದಿ ಇದು. ಹಿರಿಯ ರಂಗಕಲಾವಿದ, ನಾಟಕಕಾರ ಹಾಗೂ ನಿರ್ದೇಶಕ ಯಶವಂತ ಸರದೇಶಪಾಂಡೆ (60) ಇಂದು ಬೆಳಿಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗಲಿಲ್ಲ

ಬೆಳಿಗ್ಗೆ ಸುಮಾರು 10 ಗಂಟೆ ಸಮಯದಲ್ಲಿ ಹೃದಯಾಘಾತ ಸಂಭವಿಸಿದ್ದರಿಂದ ಅವರನ್ನು ತಕ್ಷಣವೇ ಫೋರ್ಟಿಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ನಟನೆಯ : ನಾಟಕದಿಂದ ಚಿತ್ರರಂಗದವರೆಗೆ

ಯಶವಂತ್ ಸರದೇಶಪಾಂಡೆ ಅವರು ಕನ್ನಡ ನಾಟಕರಂಗದಲ್ಲಿ ಅತೀವ ಪ್ರಭಾವ ಬೀರಿದ ಕಲಾವಿದರಾಗಿ ಗುರುತಿಸಿಕೊಂಡಿದ್ದರು.

  • ಆಲ್ ದಿ ಬೆಸ್ಟ್’ ನಾಟಕವು ರಾಜ್ಯಾದ್ಯಂತ ಯಶಸ್ಸು ಕಂಡಿತ್ತು
  • ಕಿರುತೆರೆಯಲ್ಲಿಯೂ ಅವರು ಹಲವು ಮಹತ್ವದ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು
  • ಕೆಲವು ಕನ್ನಡ ಚಲನಚಿತ್ರಗಳಲ್ಲೂ ಅವರು ಅಭಿನಯಿಸಿದ್ದೂ ಇತಿಹಾಸ

ಗಣ್ಯರಿಂದ ಸಂತಾಪ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಸೋಶಿಯಲ್ ಮೀಡಿಯಾದ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ:

ಖ್ಯಾತ ಕನ್ನಡ ರಂಗಭೂಮಿ ನಟ, ನಾಟಕಕಾರ, ನಿರ್ದೇಶಕ ಯಶವಂತ ಸರದೇಶಪಾಂಡೆ ಅವರ ನಿಧನ ದೆಕವಿದ ಸುದ್ದಿಯಿಂದ ಬೇಸರವಾಗಿದೆ. ಅವರ ಆಲ್ ದಿ ಬೆಸ್ಟ್ ನಾಟಕ ಅಪಾರ ಜನಪ್ರಿಯತೆ ಗಳಿಸಿತು. ಕನ್ನಡ ರಂಗಭೂಮಿಗೆ ಅವರ ಕೊಡುಗೆ ಮರೆತಲಾಗದು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *