ವಿಕ್ಟೋರಿಯಾ ಆಸ್ಪತ್ರೆ: ಸ್ಕ್ಯಾನಿಂಗ್ ಯಂತ್ರ ಸ್ಥಗಿತ, ರೋಗಿಗಳು ಪರದಾಟ.

ವಿಕ್ಟೋರಿಯಾ ಆಸ್ಪತ್ರೆ: ಸ್ಕ್ಯಾನಿಂಗ್ ಯಂತ್ರ ಸ್ಥಗಿತ, ರೋಗಿಗಳು ಪರದಾಟ.

ಎಂಆರ್ಐ, ಸಿಟಿ ಸ್ಕ್ಯಾನ್ ಕೆಲಸ ನಿಲ್ಲಿಸಿದ ಹಿನ್ನೆಲೆ ಸಾರ್ವಜನಿಕ ಕಟು ಅನುಭವ.

ಬೆಂಗಳೂರು: ಬೆಂಗಳೂರಿನ ಅತಿ ದೊಡ್ಡ ಸರ್ಕಾರಿ ಆಸ್ಪತ್ರೆಯಾದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ  ಸ್ಕ್ಯಾನಿಂಗ್ ಸೌಲಭ್ಯ ಸ್ಥಗಿತಗೊಂಡಿರುವುದರಿಂದ ರೋಗಿಗಳು ಪರದಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಕಳೆದ ಎರಡು ದಿನಗಳಿಂದ ಎಂಆರ್‌ಐ ಸ್ಕ್ಯಾನ್ ಯಂತ್ರ ಕಾರ್ಯನಿರ್ವಹಿಸದೇ ಇರುವುದರಿಂದ ನೂರಾರು ರೋಗಿಗಳು ಬಿಲ್ಡಿಂಗ್​ನಿಂದ ಬಿಲ್ಡಿಂಗ್​ಗೆ ಅಲೆದಾಡುವ ದುಸ್ಥಿತಿ ಎದುರಾಗಿದೆ.

ಮೂರೂ ಯಂತ್ರಗಳು ಖರಾಬು!

ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಯಂತ್ರ ಹಾಳಾಗಿರುವುದರಿಂದ ಸಮಸ್ಯೆ ಮತ್ತಷ್ಟು ಗಂಭೀರವಾಗಿದೆ. ವಿಕ್ಟೋರಿಯಾ ಆಸ್ಪತ್ರೆ ಹಾಗೂ ಪಿಎಂಎಸ್‌ಎಸ್‌ವೈ ಸೇರಿ ಮೂರು ಆಸ್ಪತ್ರೆಗಳಿಗೆ ಒಟ್ಟು ಕೇವಲ ಮೂರು ಸ್ಕ್ಯಾನಿಂಗ್ ಯಂತ್ರಗಳಷ್ಟೇ ಲಭ್ಯವಿವೆ. ಅವುಗಳಲ್ಲಿ ಒಂದು ಯಂತ್ರ ಎಸಿ ಸಮಸ್ಯೆಯಿಂದ ಸ್ಥಗಿತಗೊಂಡಿದೆ. ಇದರಿಂದ ಉಳಿದ ಎರಡು ಯಂತ್ರಗಳ ಮೇಲೆ ಹೆಚ್ಚಿನ ಒತ್ತಡ ಉಂಟಾಗಿ, ಸ್ಕ್ಯಾನಿಂಗ್ ಪ್ರಕ್ರಿಯೆ ವಿಳಂಬವಾಗುತ್ತಿದೆ.

ಎರಡು ದಿನಗಳಿಂದ ಸ್ಕ್ಯಾನಿಂಗ್ ಕೌಂಟರ್ ಬಳಿ ಬಂದು ಕೊನೆಗೆ ಬರಿಗೈಯಲ್ಲಿ ಹಿಂತಿರುಗುತ್ತಿರುವ ರೋಗಿಗಳ ಅಸಮಾಧಾನ ಹೆಚ್ಚಾಗಿದೆ. ತುರ್ತು ಚಿಕಿತ್ಸೆಗಾಗಿ ಸ್ಕ್ಯಾನಿಂಗ್ ಅವಶ್ಯಕವಾಗಿರುವ ರೋಗಿಗಳಿಗೆ ವರದಿಗಳು ತಡವಾಗಿ ಕೈ ಸೇರುತ್ತಿರುವುದರಿಂದ ಆರೋಗ್ಯ ಸೇವೆಗಳ ಗುಣಮಟ್ಟದ ಕುರಿತು ಪ್ರಶ್ನೆಗಳು ಎದ್ದಿವೆ. ಸಮಸ್ಯೆಯನ್ನು ಶೀಘ್ರ ಪರಿಹರಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಜಿಲ್ಲಾಸ್ಪತ್ರೆಗಳಲ್ಲೂ ಇದೇ ಪಾಡು!

ಇತ್ತ ರಾಜ್ಯದ 13 ಜಿಲ್ಲಾಸ್ಪತ್ರೆಗಳಲ್ಲಿಯೂ ಸ್ಕ್ಯಾನಿಂಗ್ ಯಂತ್ರಗಳು ಸ್ಥಗಿತಗೊಂಡಿರುವ ಮಾಹಿತಿ ಲಭ್ಯವಾಗಿದೆ. ಆರೋಗ್ಯ ಇಲಾಖೆ ಸುಮಾರು 143 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿರುವುದೇ ಸಮಸ್ಯೆಗೆ ಕಾರಣ ಎಂಬ ಆರೋಪವೂ ಕೇಳಿಬಂದಿದೆ. ಸಿಟಿ ಸ್ಕ್ಯಾನ್ ಮತ್ತು ಎಂಆರ್‌ಐ ಸೌಲಭ್ಯಗಳ ಕೊರತೆಯಿಂದ ಬಡ ರೋಗಿಗಳು ಹೆಚ್ಚಿನ ಸಂಕಷ್ಟಕ್ಕೆ ಸಿಲುಕಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *