ವಿಜಯನಗರ: ಭಾರೀ ಮಳೆಯಿಂದ ಹಂಪಿಯಲ್ಲಿ ಸ್ಮಾರಕಗಳ ಮುಳುಗಡೆ

ಹೊಸಪೇಟೆ: ವಿಜಯನಗರ ಜಿಲ್ಲೆಯ ತುಂಗಭದ್ರಾ ಅಣೆಕಟ್ಟೆಯಿಂದ 1.6 ಲಕ್ಷ ಕ್ಯೂಸೆಕ್‌ಗೂ ಹೆಚ್ಚು ನೀರು ಬಿಡಲಾಗುತ್ತಿದ್ದು, ಹಂಪಿಯ ಹಲವು ಸ್ಮಾರಕಗಳು ಮುಳುಗಡೆಯಾಗಿವೆ.

ಭಾರೀ ಮಳೆಯಿಂದ ಒಳ ಹರಿವು ಹೆಚ್ಚಿರುವ ಕಾರಣ ತುಂಗಭದ್ರಾ ಅಣೆಕಟ್ಟೆಯಿಂದ ಹೆಚ್ಚು ನೀರು ಬಿಡಲಾಗುತ್ತಿದ್ದು, ಹಂಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಭೇಟಿ ನೀಡುವಾಗ ನದಿಯ ಸಮೀಪ ಎಲ್ಲೆಂದರಲ್ಲಿ ಪ್ರಯಾಣಿಸದಂತೆ ವಿಜಯನಗರ ಆಡಳಿತ ಪ್ರವಾಸಿಗರಿಗೆ ಎಚ್ಚರಿಕೆ ನೀಡಿದೆ.

ತುಂಗಭದ್ರಾ ನದಿಯ ಜಲಾನಯನ ಪ್ರದೇಶಗಳಲ್ಲಿ ಕಳೆದ 20 ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಹಂಪಿಯ ಪುರಂದರ ಮಂಟಪ, ಚಕ್ರತೀರ್ಥ, ಕೋದಂಡರಾಮ ದೇವಸ್ಥಾನ, ಹನುಮ ದೇವಸ್ಥಾನ ಸೇರಿದಂತೆ 12 ಸ್ಮಾರಕಗಳು ಮುಳುಗಡೆಯಾಗಿವೆ.

ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಮಾತನಾಡಿ, ಭಾರಿ ಮಳೆಯಾದಾಗ ಅಣೆಕಟ್ಟಿನಿಂದ ನೀರು ಹೊರಬಿಡಲಾಗುತ್ತದೆ. ಇದರಿಂದಾಗಿ ಅಣೆಕಟ್ಟು ಸಂಪೂರ್ಣ ಭರ್ತಿಯಾಗಿದೆ. “ಮುನ್ನೆಚ್ಚರಿಕೆ ಕ್ರಮವಾಗಿ, ನಾನು ಪ್ರವಾಹಕ್ಕೆ ಒಳಗಾದ ಸ್ಥಳಗಳನ್ನು ಪರಿಶೀಲಿಸಿದ್ದೇನೆ ಮತ್ತು ಜನರು ಪ್ರವೇಶಿಸುವುದನ್ನು ತಡೆಯಲು ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *