ವಿಜಯಪುರ || ಸರ್ಕಾರಿ ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ: ರಾಜ್ಯಪಾಲರಿಗೆ ಯತ್ನಾಳ್ ಪತ್ರ

ವಿಜಯಪುರ || ಯತ್ನಾಳ್ ಕ್ಷೇತ್ರದಲ್ಲಿ ಇಂದು ಶಕ್ತಿ ಪ್ರದರ್ಶನ : ಬಿಜೆಪಿಗೆ ಸೆಡ್ ಹೊಡೆದ ಉಚ್ಚಟಿತ ನಾಯಕ

ವಿಜಯಪುರ: ಸರ್ಕಾರಿ ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡುವ ವಿಧೇಯಕಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿರೋಧ ವ್ಯಕ್ತಪಡಿಸಲಿದ್ದು, ಈ ಸಂಬಂಧ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.

ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿರುವ ಅವರು, ವಿವಾದಾದ್ಮಕ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ ಮಾಡಿದ್ದಾರೆ.

ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ(ತಿದ್ದುಪಡಿ) ವಿಧೇಯಕ 2025 ಅನ್ನು ಮಂಗಳವಾರ ವಿಧಾನಸಭೆಯಲ್ಲಿ ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಂಡಿಸಿದ್ದರು.

ಸದನದಲ್ಲಿ ವಿಧೇಯಕ ಮಂಡನೆಯಾಗ ಬೆನ್ನಲ್ಲೇ ಯತ್ನಾಳ್ ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಸಂವಿಧಾನ ಬಾಹಿರವಾಗಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ಒದಗಿಸುವ ಕೆಟಿಪಿಪಿ(ತಿದ್ದುಪಡಿ) ಮಸೂದೆ 2025ರ ವಿವಾದಾತ್ಮಕ ತಿದ್ದುಪಡಿಗಳಿಗೆ ಒಪ್ಪಿಗೆ ನೀಡದಂತೆ ವಿನಂತಿಸಿದ್ದಾರೆ.

Leave a Reply

Your email address will not be published. Required fields are marked *