DCM ತಾಕತ್ತಿಗೆ ನೇರ ಸವಾಲ್ ಹಾಕಿದ BJP ರಾಜ್ಯಾಧ್ಯಕ್ಷ.
ಬೆಳಗಾವಿ: ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನಡುವಿನ ಮಾತಿನ ವಾಕ್ಸಮರ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದೇ ಮೊದಲ ಬಾರಿಗೆ ವಿಜಯೇಂದ್ರ, ಡಿಕೆಶಿ ವಿರುದ್ಧ ಗಟ್ಟಿ ಧ್ವನಿಯಲ್ಲಿ ಅಬ್ಬರಿಸಿ ತೊಡೆ ತಟ್ಟಲು ಪ್ರಯತ್ನಿಸಿದ್ದಾರೆ. ರಾಜ್ಯದ ಖಜಾನೆ ಲೂಟಿ ಮಾಡಿ ಕಾಂಗ್ರೆಸ್ ತನ್ನ ಹೈಕಮಾಂಡ್ ತೃಪ್ತಿ ಪಡಿಸುತ್ತಿದೆ ಎಂಬ ವಿಜಯೇಂದ್ರ ಹೇಳಿಕೆಗೆ ಕೆಂಡಮಂಡಲಾದ ಡಿಕೆ ಶಿವಕುಮಾರ್, ಕಲೆಕ್ಷನ್ ಕಿಂಗ್ ಅಂದ್ರೆ ಅದು ವಿಜಯೇಂದ್ರ. ಅವರಪ್ಪನ ಹೆಸರು ಕೆಡಿಸಿದ್ದು ವಿಜಯೇಂದ್ರ, ಅವರ ಕಲೆಕ್ಷನ್, ವರ್ಗಾವಣೆ ದಂಧೆ ಎಲ್ಲವನ್ನ ಬಿಚ್ಚಿಡಬೇಕಾ ಎಂದು ಎಂದು ತಿರುಗೇಟು ನೀಡಿದ್ದಾರೆ. ಇದಕ್ಕೆ ವಿಜಯೇಂದ್ರ ಪ್ರತಿಕ್ರಿಯಿಸಿ, ಡಿಕೆಶಿ ತಾಕತ್ತಿಗೆ ಸವಾಲು ಹಾಕಿದ್ದಾರೆ.
ಅಧಿಕಾರದ ಮದ ಮಾತನಾಡಿಸಿದೆ
ಬೆಳಗಾವಿಯಲ್ಲಿಂದು ಮಾತನಾಡಿರುವ ವಿಜಯೇಂದ್ರ, ಡಿ.ಕೆ.ಶಿವಕುಮಾರ್ ಮನಬಂದಂತೆ ಮಾತಾಡಿದ್ದಾರೆ. ಅಧಿಕಾರದ ಮದ ಮಾತನಾಡಿಸಿರಬಹುದು.ಯಾರಿಗೋ ದಬ್ಬಾಳಿಕೆ ಮಾಡಿದಂತೆ ನನಗೆ ಮಾಡುವುದಕ್ಕೆ ಬರಬೇಡಿ. ನಾನು ಒಬ್ಬ ಪ್ರತಿನಿಧಿ ಹಾಗೂ ಒಂದು ಪಕ್ಷದ ರಾಜ್ಯಾಧ್ಯಕ್ಷನಾಗಿದ್ದೇನೆ. ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ಹೇಗೆ ಷಡ್ಯಂತ್ರ ಮಾಡಿದ್ದರೋ ಗೊತ್ತಿದೆ. ಅದನ್ನೆಲ್ಲಾ ಈಗ ಮಾತನಾಡುವುದಕ್ಕೆ ಬರಬೇಡಿ ಎಂದು ವಾಗ್ದಾಳಿ ನಡೆಸಿದರು.
ಡಿಕೆಶಿ ತಾಕತ್ತಿಗೆ ವಿಜಯೇಂದ್ರ ಸವಾಲ್
ಡಿಕೆ ಶಿವಕುಮಾರ್ ಅವರಿಂದ ನಾನು ಪಾಠ ಕಲಿಯುವ ಅಗತ್ಯ ಇಲ್ಲ. ಭ್ರಷ್ಟಾಚಾರದ ಪಿತಾಮಹ ಯಾರು ಎಂದು ಕೇಳಿದರೆ ರಾಜ್ಯದಲ್ಲಿ ಡಿಕೆಶಿ ಹೆಸರೇ ಹೇಳ್ತಾರೆ. ನನ್ನ ಬಗ್ಗೆ ಮಾತನಾಡುವಾಗ ನಾಲಿಗೆ ಬಿಗಿಹಿಡಿದು ಮಾತನಾಡಲಿ. ನಾವೇನು ಹೆದರಿಕೊಂಡು ಓಡಿ ಹೋಗ್ತಿದ್ದೀವಾ? ಕಾಂಗ್ರೆಸ್ನವರ ಯೋಗ್ಯತೆ ಏನು ಅನ್ನೋದು ಇಡೀ ದೇಶಕ್ಕೆ ಗೊತ್ತಿದೆ. ತಾಕತ್ತು ಇದ್ದರೆ ಅದೇನು ಬಿಚ್ಚಿಡ್ತಾರೋ ಬಿಚ್ಚಿಡ್ಲಿ ಎಂದು ಸವಾಲ್ ಹಾಕಿದ್ದಾರೆ.
For More Updates Join our WhatsApp Group :



